ನಿರ್ದೇಶಕ ಆರ್ ಜಿವಿಯಿಂದ ಕಬ್ಜ ಚಿತ್ರದ ಥೀಮ್ ಪೋಸ್ಟರ್ ಗುರುವಾರ ಬಿಡುಗಡೆ!

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ತಯಾರಾಗುತ್ತಿರುವ ‘ಕಬ್ಜ’ ಚಿತ್ರ ದೇಶದ ಚಿತ್ರರಂಗದಲ್ಲಿ ಬಹುದೊಡ್ಡ ಪ್ರಾಜೆಕ್ಟ್ ಎಂದು ಬಿಂಬಿತವಾಗಿದ್ದು, ಚಿತ್ರ ರಸಿಕರ ನಿರೀಕ್ಷೆಯನ್ನು ಹೆಚ್ಚಿಸಿದೆ. 
ರಾಮ್ ಗೋಪಾಲ್ ವರ್ಮಾ
ರಾಮ್ ಗೋಪಾಲ್ ವರ್ಮಾ

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ತಯಾರಾಗುತ್ತಿರುವ ‘ಕಬ್ಜ’ ಚಿತ್ರ ದೇಶದ  ಚಿತ್ರರಂಗದಲ್ಲಿ ಬಹುದೊಡ್ಡ ಪ್ರಾಜೆಕ್ಟ್ ಎಂದು ಬಿಂಬಿತವಾಗಿದ್ದು, ಚಿತ್ರ ರಸಿಕರ ನಿರೀಕ್ಷೆಯನ್ನು ಹೆಚ್ಚಿಸಿದೆ.

ಈ ಚಿತ್ರ ಏಳು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವುದೂ ಸಹ  ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ಭರ್ಜರಿ ಫೋಟೋಶೂಟ್ ಹಾಗೂ ಮೋಷನ್ ಪೋಸ್ಟರ್ ಮೂಲಕ ಸದ್ದು ಮಾಡಿರುವ ‘ಕಬ್ಜ’ ಈಗ ಥೀಮ್ ಪೋಸ್ಟರ್ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ.

ಇದೇ 17 ರಂದು ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ಕಬ್ಜ ಚಿತ್ರದ  ಥೀಮ್ ಪೋಸ್ಟರ್ ನ್ನು  ಸ್ಟಾರ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ  ಬಿಡುಗಡೆ ಮಾಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com