ಡ್ರಗ್ಸ್ ಪ್ರಕರಣ: ನಟಿ ಸಂಜನಾಗೆ 2 ದಿನ, ವೀರೇಶ್ ಖನ್ನಾ, ರವಿಶಂಕರ್ ಗೆ 14 ದಿನಗಳ ನ್ಯಾಯಾಂಗ ಬಂಧನ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಮತ್ತಿತರರಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Published: 16th September 2020 05:48 PM  |   Last Updated: 16th September 2020 05:48 PM   |  A+A-


ಸಂಜನಾ

Posted By : Raghavendra Adiga
Source : Online Desk

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಮತ್ತಿತರರಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಪ್ರಕರಣದಲ್ಲಿ ನಟಿ ಸಂಜನಾಗೆ ಎರಡು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ, ಇದರಂತೆ ಸೆಪ್ಟೆಂಬರ್ 18ರವರೆಗೆ  ಸಂಜನಾ ನ್ಯಾಯಾಂಗ ಬಂಧನದಲ್ಲಿರಬೇಕಿದೆ,

ಸಿಸಿಬಿ ಕಸ್ಟಡಿ ಅಂತ್ಯವಾಗಿದ್ದ ಹಿನ್ನೆಲೆ ಬುಧವಾರ ನಟಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ನಟಿ ಸಂಜನಾ ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟ್ ಗೆ ಹಾಜರಾಗಿದ್ದರು. 

ಈ ವೇಳೆ ವಿಚಾರಣೆ ನಡೆಸಿದ 1 ನೇ ಎಸಿಎಂಎಂ ಕೋರ್ಟ್ ಸಂಜನಾಗೆ 2 ದಿನ ಹಾಗೂ  ವೀರೇನ್ ಖನ್ನಾ, ರವಿಶಂಕರ್ ಅವರುಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. 

ಇದಕ್ಕೆ ಮುನ್ನ ಸೋಮವಾರ ಇದೇ ಪ್ರಕರಣದಲ್ಲಿ ನಟಿ ರಾಗಿಣಿಗೂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಮೂರು ದಿನಗಳ ಕಾಲ ಮುಂದೂಡಿತ್ತು

Stay up to date on all the latest ಸಿನಿಮಾ ಸುದ್ದಿ news
Poll
Parliament_House1

ಕೋವಿಡ್-19 ಹರಡುವಿಕೆ ಕಾರಣ ಸಂಸತ್ತಿನ ಮುಂಗಾರು ಅಧಿವೇಶನ ಅವಧಿಯನ್ನು ಅರ್ಧಕ್ಕೆ ಮೊಟಕುಗೊಳಿಸಬೇಕೆ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp