ಉಪೇಂದ್ರ ನಟನೆಯ ಕಬ್ಜದಲ್ಲಿ ಅನೂಪ್ ರೇವಣ್ಣ 

ಈ ಹಿಂದೆ ಲಕ್ಷ್ಮಣ ಮತ್ತು ಪಂಟ ಎಂಬ ಸಿನಿಮಾದಲ್ಲಿ ನಟಿಸಿದ್ದರು. ಈಗ ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾದಲ್ಲಿ ಸೂಪರ್ ಸ್ಟಾರ್ ಉಪೇಂದ್ರ ಅವರ ಜೊತೆ ಸ್ಕ್ರೀನ್ ಹಂಚಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರ ಅಂಡರ್ ವರ್ಲ್ಡ್ ಡಾನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಉಪೇಂದ್ರ
ಉಪೇಂದ್ರ

ಮಾಜಿ ಸಚಿವ ಎಚ್ ಎಂ ರೇವಣ್ಣ ಪುತ್ರ ಅನೂಪ್ ರೇವಣ್ಣ ಮೂರನೇ ಸಿನಿಮಾಗೆ ಸಹಿ ಮಾಡಿದ್ದಾರೆ.

ಈ ಹಿಂದೆ ಲಕ್ಷ್ಮಣ ಮತ್ತು ಪಂಟ ಎಂಬ ಸಿನಿಮಾದಲ್ಲಿ ನಟಿಸಿದ್ದರು. ಈಗ ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾದಲ್ಲಿ ಸೂಪರ್ ಸ್ಟಾರ್ ಉಪೇಂದ್ರ ಅವರ ಜೊತೆ ಸ್ಕ್ರೀನ್ ಹಂಚಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರ ಅಂಡರ್ ವರ್ಲ್ಡ್ ಡಾನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ನನಗೆ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ನೀಡದಂತೆ ಸೂಚನೆ ನೀಡಿದ್ದಾರೆ, ನನಗೆ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ನೀಡಿದ್ದಾರೆ ಹಾಗೂ ಉಪೇಂದ್ರ ಜೊತೆಗೆ ನಟಿಸುತ್ತಿದ್ದೇನೆ, ಈ ಸಿನಿಮಾ ಕಥೆ ಸಂಪೂರ್ಣ ಭೂಗತ ಜಗತ್ತಿನ ಕಥೆಯಾಗಿದೆ ಎಂದು ಹೇಳಿದ್ದಾರೆ. 

ಕಬ್ಜ ಬಿಗ್ ಬಜೆಟ್ ಸಿನಿಮಾವಾಗಿದೆ, ಉಪೇಂದ್ರ ಅವರು ನಟ ಹಾಗೂ ನಿರ್ದೇಶಕನಾಗಿ ಕೆಲಸ ಮಾಡಿರುವುದನ್ನು ನೋಡಿದ್ದೇವೆ, ಸಿನಿಮಾ ನಿರ್ದೇಶಕರಿಗೆ ಉತ್ತಮ ತಾಂತ್ರಿಕ ಜ್ಞಾನವಿದೆ, ಸೆಟ್ ನಲ್ಲಿ ಅವರು ನನಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದಾರೆ, ಅವರ ನಟನೆ ನೋಡಿ ನಾನು ಸಾಕಷ್ಟು ಕಲಿತಿದ್ದೇನೆ, ಲಕ್ಷ್ಮಣ ಸಿನಿಮಾದಲ್ಲಿ ಚಂದ್ರು ಜೊತೆ ಕೆಲಸ ಮಾಡಿದ್ದೇನೆ, ಕಬ್ಜ ಸಿನಿಮಾ ನನಗೆ ಉತ್ತಮ ಅವಕಾಶ ನೀಡುತ್ತಿದೆ ಎಂದು ಅನೂಪ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಕಬ್ಜದಲ್ಲಿ  ಅನೂಪ್ ರೆಟ್ರೋ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ, ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಯಲ್ಲಿ ಅನೂಪ್ ತರಬೇತಿ ಪಡೆದಿದ್ದು, ಅಕ್ಟೋಬರ್ ಅಂತ್ಯದಲ್ಲಿ ಸಿನಿಮಾ ಶೂಟಿಂಗ್ ನಲ್ಲಿ ಪಾಲ್ಗೋಳ್ಳುವುದಾಗಿ ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com