ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಸಿಸಿಬಿ ನೋಟಿಸ್ ಬಂದಿದೆ, ವಿಚಾರಣೆಗೆ ಹಾಜರಾಗುತ್ತೇನೆ- ನಿರೂಪಕಿ ಅನುಶ್ರೀ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್ ಬಗ್ಗೆ ಸ್ಪಷ್ಪಪಡಿಸಿರುವ ನಟಿ, ಜನಪ್ರಿಯ ನಿರೂಪಕಿ ಅನುಶ್ರೀ, ಇಂದು ಸಿಸಿಬಿ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

Published: 25th September 2020 01:16 AM  |   Last Updated: 25th September 2020 01:35 PM   |  A+A-


Anusree1

ನಿರೂಪಕಿ ಅನುಶ್ರೀ

Posted By : Nagaraja AB
Source : Online Desk

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್ ಬಗ್ಗೆ ಸ್ಪಷ್ಪಪಡಿಸಿರುವ ನಟಿ, ಜನಪ್ರಿಯ ನಿರೂಪಕಿ ಅನುಶ್ರೀ, ಇಂದು ಸಿಸಿಬಿ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ವಿಚಾರಣೆಗೆ ಹಾಜರಾಗಲು ಮಂಗಳೂರಿನ ಸಿಸಿಬಿ ಕಚೇರಿಯಿಂದ  ನೋಟಿಸ್ ಜಾರಿಯಾಗಿದ್ದು, ಶುಕ್ರವಾರ ಬೆಳಗ್ಗೆ 11 ಗಂಟೆಗೆ ನಾನು ಸ್ವತ: ಮಂಗಳೂರಿಗೆ ತೆರಳಿ ವಿಚಾರಣೆಗೆ ಖುದ್ದಾಗಿ ಹಾಜರಾಗುವುದಾಗಿ ಅನುಶ್ರೀ ತಿಳಿಸಿದ್ದಾರೆ.

ಇದು ಬರೀ ವಿಚಾರಣೆಯ ಸೂಚನೆಯಾಗಿದ್ದು, ಮಾಧ್ಯಮಗಳಲ್ಲಿ ನಾನು ನಟಿಸಿದ ಚಿತ್ರವೊಂದನ್ನು ಬಳಸಿ ಅಪರಾಧಿ ಎಂಬಂತೆ  ತೋರಿಸುವ ಪ್ರಯತ್ನಗಳು ನಡೆಯುತ್ತಿವೆ.ಡ್ರಗ್ಸ್ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲ, ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

 

 

Posted by Anchor Anushree on Thursday, 24 September 2020
Stay up to date on all the latest ಸಿನಿಮಾ ಸುದ್ದಿ news
Poll
Rohit Sharma

ಮುಂಬರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾದ ಸಾಧನೆಯ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp