ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ನಟಿ ರಾಗಿಣಿ, ಸಂಜನಾಗೆ ಜೈಲೇ ಗತಿ!
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಎನ್ ಡಿಪಿಎಸ್ ವಿಶೇಷ ನ್ಯಾಯಾಲಯವು ನಟಿಯರಾದ ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳಿಸಿದೆ. ಹೀಗಾಗಿ ನಟಿಯರಿಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿಯಾಗಿದೆ.
Published: 28th September 2020 06:19 PM | Last Updated: 28th September 2020 08:19 PM | A+A A-

ರಾಗಿಣಿ-ಸಂಜನಾ
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಎನ್ ಡಿಪಿಎಸ್ ವಿಶೇಷ ನ್ಯಾಯಾಲಯವು ನಟಿಯರಾದ ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳಿಸಿದೆ. ಹೀಗಾಗಿ ನಟಿಯರಿಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿಯಾಗಿದೆ.
ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಂ ಸೀನಪ್ಪ ಅವರು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಗಿಣಿ ಮತ್ತು ಸಂಜನಾ ಹೈಕೋರ್ಟ್ ಮೊರೆಹೋಗುವ ನಿರೀಕ್ಷೆಯಿದೆ. ಮುಂದಿನ ಎರಡು ದಿನಗಳಲ್ಲಿ ನಟಿಯರ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.
ಇದೇ ವೇಳೆ ರವಿಶಂಕರ್, ಪ್ರಶಾಂತ್ ರಂಕಾ, ಅಭಿಸ್ವಾಮಿ, ವೈಭವ್ ಚೈನ್ ಮತ್ತು ಪ್ರಶಾಂತ್ ರಾಜು ಜಾಮೀನು ಅರ್ಜಿ ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಲಾಗಿದೆ. ವಿರೇನ್ ಖನ್ನ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 1ಕ್ಕೆ ಮುಂದೂಡಲಾಗಿದೆ.