ಹತ್ರಾಸ್ ಗ್ಯಾಂಗ್ ರೇಪ್: ಅಕ್ಷಯ್ ಕುಮಾರ್ ಟ್ವೀಟ್ ಗೆ ತಿರುಗೇಟು ನೀಡುವ ಮೂಲಕ ಮೋದಿಯನ್ನು ಕುಟುಕಿದ ನಟಿ ರಮ್ಯಾ

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನು ಅಪರಾಧಿಗಳನ್ನು ಗಲ್ಲಿಗೇರಿಸಿ ಎಂದು ನಟ ಅಕ್ಷಯ್ ಕುಮಾರ್ ಮಾಡಿದ್ದ ಟ್ವೀಟ್ ತಿರುಗೇಟು ನೀಡುವ ಮೂಲಕ ಪ್ರಧಾನಿ ಮೋದಿಯನ್ನು ಕುಟುಕಿದ್ದಾರೆ.
ಅಕ್ಷಯ್ ಕುಮಾರ್-ರಮ್ಯಾ
ಅಕ್ಷಯ್ ಕುಮಾರ್-ರಮ್ಯಾ

ಬೆಂಗಳೂರು: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನು ಅಪರಾಧಿಗಳನ್ನು ಗಲ್ಲಿಗೇರಿಸಿ ಎಂದು ನಟ ಅಕ್ಷಯ್ ಕುಮಾರ್ ಮಾಡಿದ್ದ ಟ್ವೀಟ್ ತಿರುಗೇಟು ನೀಡುವ ಮೂಲಕ ಪ್ರಧಾನಿ ಮೋದಿಯನ್ನು ಕುಟುಕಿದ್ದಾರೆ. 

ಹತ್ರಾಸ್ ರೇಪ್ ಸಂತ್ರಸ್ತೆಯ ಸಾವಿನ ನಂತರ ಅಕ್ಷಯ್ ಕುಮಾರ್ ಟ್ವೀಟ್ ಮಾಡಿ ಅಪರಾಧಿಗಳನ್ನು ಗಲ್ಲಿಗೇರಿಸಿ. ಹೆಣ್ಣುಮಕ್ಕಳನ್ನು ಮತ್ತು ಸಹೋದರಿಯರನ್ನು ರಕ್ಷಿಸಲು ಧ್ವನಿ ಎತ್ತಬೇಕು. ಕೇವಲ ಶಿಕ್ಷೆಯ ಆಲೋಚನೆಯೇ ಅತ್ಯಾಚಾರಿಗಳನ್ನು ಭಯದಿಂದ ನಡುಗಿಸಬೇಕಾಗುತ್ತದೆ ಎಂದು ಟ್ವೀಟಿಸಿದ್ದರು. ಈ ಟ್ವೀಟ್ ಗೆ ಪ್ರತಿಕ್ರಿಯಿಸಿದ ನಟಿ, ಮಾಜಿ ಸಂಸದೆ ರಮ್ಯಾ ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ಮಾತನಾಡಿದ್ದಾರೆ. 
 

'ನಿಮ್ಮ ಹತಾಶೆ ಮುಂದುವರೆಯುತ್ತದೆ. ಇದಕ್ಕೆಲ್ಲ ಕೊನೆ ಇಲ್ಲ. ಏಕೆ ಎಂದು ನಿಮಗೆ ತಿಳಿದಿದೆಯೇ? ಇದು ಕಾನೂನಿಗೆ ಸಂಬಂಧಪಟ್ಟಿದ್ದಲ್ಲ, ದೋಷಪೂರಿತ ಮನಸ್ಥಿತಿಗಳಿಗೆ ಸಂಬಂಧಪಟ್ಟದ್ದು, ಈ ಮನಸ್ಥಿತಿಗೆ ಯಾರು ಪೋಷಿಸುತ್ತಿದ್ದಾರೆ? ಮೊದಲಿಗೆ, ಪ್ರಧಾನಿ ಮೋದಿ ಪ್ರತಿದಿನ ಮಹಿಳೆಯರಿಗೆ ಅತ್ಯಾಚಾರದ ಬೆದರಿಕೆ ಹಾಕುವ ರಾಕ್ಷಸರನ್ನು ಅನುಸರಿಸುತ್ತಾರೆ. ಬದಲಾವಣೆ ಎನ್ನುವುದು ಮೊದಲು ಮೇಲ್ಭಾಗದಲ್ಲಿ ಪ್ರಾರಂಭವಾಗುತ್ತದೆ ಎಂದು ನೀವು ಯೋಚಿಸುವುದಿಲ್ಲವೇ ಎಂದು ರಮ್ಯಾ ಅವರು ಅಕ್ಷಯ್‌ ಕುಮಾರ್ ಅವರನ್ನು ಪ್ರಶ್ನೆ ಮಾಡಿದ್ದಾರೆ.

ರಮ್ಯಾ
ರಮ್ಯಾ

ಇದೇ ವೇಳೆ, ಕುವೈತ್ ರಾಜ ಶೇಖ್ ಸಭಾ ಅಲ್ ಅಹ್ಮದ್ ಅಲ್ ಸಭಾ ನಿಧನಕ್ಕೆ ಮೋದಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸುತ್ತಾರೆ. ಆದರೆ ಅತ್ಯಾಚಾರ ಸಂತ್ರಸ್ತೆ ಮೃತಪಟ್ಟರೆ ಈ ಬಗ್ಗೆ ಯಾಕೆ ಮಾತನಾಡುವುದಿಲ್ಲ. ಮೃತಪಟ್ಟ ಯುವತಿಯ ಗತಿಯೇನು? ಟ್ವೀಟ್ ಮಾಡಿದ್ದಾರೆ. 

ಸೆ. 14ರಂದು ಯುವತಿಯು ತಮ್ಮ ಜಮೀನಿನಲ್ಲಿ ತಾಯಿಯೊಂದಿಗೆ ಮೇವು ತರಲು ಹೋಗಿದ್ದಾಗ ನಾಲ್ವರು ಕಾಮುಕರು ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅಲ್ಲದೆ, ಆಕೆಯ ನಾಲಿಗೆಯನ್ನು ಕತ್ತರಿಸಿದ್ದಾರೆ. ಆಕೆಯ ಬೆನ್ನುಮೂಳೆ ಮತ್ತು ಕುತ್ತಿಗೆಗೆ ಹಾನಿ ಮಾಡಿದ್ದಾರೆ. ಗಂಭೀರ ಗಾಯಗಳಿಂದ ದೆಹಲಿಯ ಸಫ್ದಾರ್​ ಜಂಗ್​ ಆಸ್ಪತ್ರೆಗೆ ದಾಖಲಾಗಿದ್ದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com