ಸಂಗೀತ ಸಂಯೋಜಕ ಅರ್ಜುನ್ ಜನ್ಯಗೆ ಕೋವಿಡ್ ಸೋಂಕು; ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. 'ತಡವಾಗಿ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿತು. ನಂತರ ಕೊರೊನಾ ಪರೀಕ್ಷೆ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಾನು ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದೇನೆ' ಎಂದು ತಿಳಿಸಿದ್ದಾರೆ.
ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಹಲವು ಸಿನಿಮಾ ಕೆಲಸಗಳನ್ನು ಬ್ಯುಸಿ ಆಗಿದ್ದ ಅರ್ಜುನ್ ಜನ್ಯ, ಕೊವಿಡ್-19 ಕಾರಣದಿಂದ ಗ್ಯಾಪ್ ತೆಗೆದುಕೊಳ್ಳುವಂತಾಗಿದೆ.
ಎಲ್ಲ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೂಡ ನನಗೆ ಹೇಗೆ ಕೊರೊನಾ ವೈರಸ್ ತಗುಲಿತು ಎಂಬುದು ತಿಳಿದಿಲ್ಲ. ಶೀಘ್ರವೇ ಚೇತರಿಸಿಕೊಳ್ಳುತ್ತೇನೆ ಎಂಬ ಭರವಸೆ ಇದೆ. ನೆಗೆಟಿವ್ ವರದಿ ಬಂದ ಬಳಿಕ ವೈದ್ಯರ ಸಲಹೆ ಪಡೆದುಕೊಂಡು ಕೆಲಸ ಆರಂಭಿಸುತ್ತೇನೆ’ ಎಂದು ಮಾಧ್ಯಮಗಳಿಗೆ ಅರ್ಜುನ್ ಜನ್ಯ ಪ್ರತಿಕ್ರಿಯೆ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ