ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್
ಸಿನಿಮಾ ಸುದ್ದಿ
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್'ಗೆ ಕೊರೋನಾ ಸೋಂಕು ದೃಢ
ಲವ್ ಮಾಕ್ಟೈಲ್ ಖ್ಯಾತ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್'ಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಲವ್ ಮಾಕ್ಟೈಲ್ ಖ್ಯಾತ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್'ಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಈ ಕುರಿತು ಸ್ವತಃ ಡಾರ್ಲಿಂಗ್ ಕೃಷ್ಣಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಹೇಳಿದ್ದಾರೆ.
ಮಿಲನ ಹಾಗೂ ನನ್ನ ಕೊರೋನಾ ಪರೀಕ್ಷೆಯ ವರದಿ ಬಂದಿದ್ದು, ಇಬ್ಬರೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಮ್ಮೊಂದಿಗೆ ಸಂಪರ್ಕದಲ್ಲಿದ್ದವರು ದಯವಿಟ್ಟು ಪರೀಕ್ಷೆಗೊಳಗಾಗುವಂತೆ ಮನವಿ ಮಾಡಿಕೊಳ್ಳುತ್ತೇವೆಂದು ತಿಳಿಸಿದ್ದಾರೆ.
ಸ್ಯಾಂಡಲ್ವುಡ್ ಯುವ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಪ್ರೇಮಿಗಳ ದಿನದಂದು ಗಣ್ಯಾತಿಗಣ್ಯರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ