ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ: ವದಂತಿಗಳಿಗೆ ಅರ್ಜುನ್ ಜನ್ಯ ಸ್ಪಷ್ಟನೆ

ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆರೋಗ್ಯ, ಕುಟುಂಬದ ಬಗ್ಗೆ ಕೆಲ ಸುಳ್ಳು ಸುದ್ದಿಗಳು ಹರಡುತ್ತಿದೆ. ಈ ಬಗ್ಗೆ ಅರ್ಜುನ್ ಜನ್ಯ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಅರ್ಜುನ್ ಜನ್ಯ
ಅರ್ಜುನ್ ಜನ್ಯ
Updated on

ಬೆಂಳಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆರೋಗ್ಯ, ಕುಟುಂಬದ ಬಗ್ಗೆ ಕೆಲ ಸುಳ್ಳು ಸುದ್ದಿಗಳು ಹರಡುತ್ತಿದೆ. ಈ ಬಗ್ಗೆ ಅರ್ಜುನ್ ಜನ್ಯ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಎಲ್ಲರಿಗೂ ನಿಮ್ಮ ಅರ್ಜುನ್ ಜನ್ಯ ಮಾಡುವ ನಮಸ್ಕಾರಗಳು ಈ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಯೂಟ್ಯೂಬ್ ಚಾನೆಲ್‌ಗಳು ನನ್ನ ಬಗ್ಗೆ ನನ್ನ ಕುಟುಂಬದ ಬಗ್ಗೆ, ನನ್ನ ಆರೋಗ್ಯದ ಬಗ್ಗೆ ತಪ್ಪು ಮಾಹಿತಿಗಳನ್ನು
ಹಬ್ಬಿಸುತ್ತಿದ್ದಾರೆ. ಇದು ಸರಿ ಹೋಗಬಹುದು ಎಂದು ನಾನು ಸಮಾಧಾನವಾಗಿದ್ದೆ, ಆದರೆ ದಿನೆ ದಿನೇ ಇದು ಹೆಚ್ಚಾಗುತ್ತಿದೆ.

ಜನರಲ್ಲಿ ನಾನು ವಿನಂತಿಸಿಕೊಳ್ಳುವುದೇನೆಂದರೆ ಈ ಕೆಲವು ಯೂಟ್ಯೂಬ್ ಚಾನಲ್‌ಗಳು ನೀಡಿದ ಮಾಹಿತಿಗಳು ಅಪ್ಪಟ ಸುಳ್ಳು. ನಾನು ಆರೋಗ್ಯವಾಗಿದ್ದೇನೆ. ನನಗೆ ಕೊರೋನಾ ಬಂದು ಗುಣಮುಖನಾಗಿ ವೈದ್ಯರ ಸಲಹೆಯಂತೆ ಈಗ ಮನೆಯಲ್ಲಿಯೇ ಹತ್ತು ದಿನದ ಐಸೋಲೇಶನ್‌ನಲ್ಲಿದ್ದೇನೆ. ಇದರಲ್ಲಿ ಈಗಾಗಲೇ ಆರು ದಿನಗಳು ಪೂರ್ಣಗೊಂಡಿವೆ, ಇನ್ನು ಉಳಿದ ನಾಲ್ಕೈದು ದಿನಗಳು ಕಳೆದ ನಂತರ ನನ್ನ ದೈನಂದಿನ ಕೆಲಸಗಳನ್ನು ಮುಂದುವರಿಸುತ್ತೇನೆ. ಮತ್ತೊಮ್ಮೆ ಈ ರೀತಿಯ ಹೀನ ಕಾರ್ಯಗಳನ್ನು ಮಾಡುತ್ತಿರುವ ಯೂಟ್ಯೂಬ್‌ ಚಾನಲ್‌ಗಳನ್ನು ವಿನಂತಿಸಿಕೊಳ್ಳುತ್ತಿದ್ದೇನೆ.

ಇನ್ನು ಮುಂದಾದರೂ ಈ ರೀತಿಯ ಸುಳ್ಳು ಸುದ್ದಿಗಳನ್ನು ಹಬ್ಬಿಸದಂತೆ ವಿನಂತಿಸಿಕೊಳ್ಳುತ್ತಿದ್ದೇನೆ. ಇದರಿಂದ ಜನರಲ್ಲಿ ಕಳವಳ ಹಾಗೂ ಕುಟುಂಬದವರಿಗೂ ಇದರಿಂದ ಮಾನಸಿಕವಾಗಿ ನೋವು ಹಾಗೂ ತೊಂದರೆಯಾಗುತ್ತದೆ. ಈಗಾಗಲೇ ನನ್ನ ಗಮನಕ್ಕೆ ಬಂದಂತಹ ಎಲ್ಲ ಸಾಕ್ಷಿಗಳನ್ನು ಸೈಬರ್ ಪೊಲೀಸ್‌ಗೆ ನೀಡಿದ್ದೇನೆ. ದಯವಿಟ್ಟು ನೀವು ಮಾಡಿದ ವಿಡಿಯೋಗಳನ್ನು ಈ ಕೂಡಲೇ ತೆಗೆಯಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com