ಕಾಮುಕರನ್ನು ಬಂಧಿಸುವ ಕಾನೂನು ಗಟ್ಟಿಯಾಗಬೇಕು: ಮೈಸೂರು ಗ್ಯಾಂಗ್ ರೇಪ್ ಬಗ್ಗೆ ನಟಿ ಶ್ರುತಿ ಪೋಸ್ಟ್ ವೈರಲ್

ಮೈಸೂರು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶೃತಿ ಪ್ರತಿಕ್ರಿಯೆ ನೀಡಿದ್ದಾರೆ, ಈ ಸಂಬಂಧ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.
ಶೃತಿ
ಶೃತಿ
Updated on

ಬೆಂಗಳೂರು: ಮೈಸೂರು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶೃತಿ ಪ್ರತಿಕ್ರಿಯೆ ನೀಡಿದ್ದಾರೆ, ಈ ಸಂಬಂಧ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಬೇಸರಗೊಂಡಿರುವ ನಟಿ ಶ್ರುತಿ, ಅನಿಷ್ಟ ಕಾಮುಕರನ್ನು ಬಂಧಿಸುವ ಕಾನೂನು ಇನ್ನೂ ಗಟ್ಟಿಯಾಗಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ. 

ಪುರುಷರು ಬೆಳೆಯುವ ಮನೆಯ ವಾತಾವರಣ, ಸಂಸ್ಕಾರ ಮತ್ತು ಪೋಷಕರ ಜವಾಬ್ದಾರಿ ಕೂಡ ಗಟ್ಟಿಯಾಗಬೇಕು ಎಂದು ನಟಿ ಶ್ರುತಿ ಅಭಿಪ್ರಾಯ ಪಟ್ಟಿದ್ದಾರೆ.ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ? ಇಂತಹ ಪುರುಷರ ಮನಃಸ್ಥಿತಿ ಬದಲಾಗುವುದೆಂದು? ಇಂತಹ ಅನಿಷ್ಟ ಕಾಮುಕರನ್ನು ಬಂಧಿಸುವ, ಅವರನ್ನು ಶಿಕ್ಷಿಸುವ ಕಾನೂನು ಮತ್ತಷ್ಟು ಗಟ್ಟಿಯಾಗಬೇಕು ಎನ್ನುವುದು ಎಷ್ಟು ಸತ್ಯವೋ, ಇಂತಹ ಪುರುಷರು ಬೆಳೆಯುವ ಮನೆಯ ವಾತಾವರಣ, ಸಂಸ್ಕಾರ, ಪೋಷಕರ ಜವಾಬ್ದಾರಿಯಲ್ಲಿಯೂ ಕೂಡ ಮತ್ತಷ್ಟು ಗಟ್ಟಿಯಾಗಬೇಕು ಎನ್ನುವುದು ನನ್ನ ಅಭಿಪ್ರಾಯ ಹೌದಲ್ಲವೇ...

ಹುಟ್ಟಿನಿಂದ ಸಾವಿನವರೆಗೆ ಹೆಣ್ಣು ಮಕ್ಕಳು ಅನುಭವಿಸುವ ಕಷ್ಟ ನೂರಾರು. ಆದರೂ ಹಲವಾರು ಮಹಿಳೆಯರು ಅದನ್ನು ಹಿಮ್ಮೆಟ್ಟಿ ಇಡೀ ಭಾರತವೇ ಮೆಚ್ಚುವಂತಹ ಸಾಧನೆಯನ್ನು ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಮೂಹಿಕ ಅತ್ಯಾಚಾರದ ಘಟನೆಗಳು ಮಹಿಳೆಯ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸುತ್ತದೆ. ಹಾಗಾಗದಿರಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ನಟಿ ಶ್ರುತಿ ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com