'ಗಜಾನನ and ಗ್ಯಾಂಗ್' ಫೆ.4ಕ್ಕೆ ಬೆಳ್ಳಿತೆರೆಗೆ ಎಂಟ್ರಿ‌: ಗ್ಯಾಂಗ್ ನಲ್ಲಿ ಬಿಗ್ ಬಾಸ್ ಖ್ಯಾತಿಯ ರಘು, ಬ್ರೋ ಗೌಡ 

ಸಿನಿಮಾದಲ್ಲಿ ನಾಯಕ ಶ್ರೀ ಮಹಾದೇವ್ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಗಜ ಎಂಬ ಪಾತ್ರದಲ್ಲಿ ಶ್ರೀ ನಟಿಸಿದರೆ, ನಾಯಕಿ ಅದಿತಿ ಪ್ರಭುದೇವ ಮಿಡಲ್ ಕ್ಲಾಸ್ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ.
ಸಿನಿಮಾ ಪೋಸ್ಟರ್
ಸಿನಿಮಾ ಪೋಸ್ಟರ್
Updated on

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಭರವಸೆ ನಾಯಕನಾಗಿ ಗುರುತಿಸಿಕೊಂಡಿರುವ ಶ್ರೀ ಮಹಾದೇವ್ ಹಾಗೂ ನಟಿ ಅದಿತಿ ಪ್ರಭುದೇವ ನಟನೆಯ ‘ಗಜಾನನ and ಗ್ಯಾಂಗ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಫೆಬ್ರವರಿ 4ರಂದು‌ ಬೆಳ್ಳಿತೆರೆಗೆ ಗಜಾನನ and ಗ್ಯಾಂಗ್ ಸಿನಿಮಾ ಎಂಟ್ರಿ‌ ಕೊಡ್ತಿದೆ. 

ಟ್ರೇಲರ್ ಹಾಗೂ ಸಾಂಗ್ ಮೂಲಕ ಗಜಾನನ and ಗ್ಯಾಂಗ್ ಸಿನಿಮಾ ಕ್ಯೂರಿಯಾಸಿಟಿ ಹುಟ್ಟಿಸಿತ್ತು. 'ನಮ್ ಗಣಿ ಬಿಕಾಂ ಪಾಸ್' ಸಿನಿಮಾ ಮೂಲಕ ಚಿತ್ರರಂಗಕ್ಕೆ ನಾಯಕ ಮತ್ತು ನಿರ್ದೇಶಕನಾಗಿ ಪಾದಾರ್ಪಣೆ ಮಾಡಿದ್ದ ನಟ ಅಭಿಷೇಕ್ ಶೆಟ್ಟಿ ‘ಗಜಾನನ and ಗ್ಯಾಂಗ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

'ಗಜಾನನ and ಗ್ಯಾಂಗ್' ಟೈಟಲೇ ಹೇಳುವಂತೆ ಕಾಲೇಜ್ ಕಥೆಯಾಧಾರಿತ ಸಿನಿಮಾ. ಕಾಮಿಡಿ, ಸೆಂಟಿಮೆಂಟ್ ಕೂಡ ಸಿನಿಮಾದಲ್ಲಿದೆ. ಸಿನಿಮಾದಲ್ಲಿ ಶ್ರೀ ಮಹಾದೇವ್ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಗಜ ಎಂಬ ಪಾತ್ರದಲ್ಲಿ ಶ್ರೀ ನಟಿಸಿದ್ರೆ, ಅದಿತಿ ಪ್ರಭುದೇವ ಮಿಡಲ್ ಕ್ಲಾಸ್ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ.

ನಿರ್ಮಾಪಕ ಯು ಎಸ್ ನಾಗೇಶ್ ಕುಮಾರ್ 'ಗಜಾನನ and ಗ್ಯಾಂಗ್' ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಪ್ರದ್ಯುತನ್ ಸಂಗೀತ. ಉದಯ ಲೀಲಾ ಸಿನಿಮೆಟೊಗ್ರಫಿ, ವಿಜೆಟ್ ಚಂದ್ರ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನವಿದೆ. ಉಳಿದಂತೆ ಬಿಗ್ ಬಾಸ್ ಖ್ಯಾತಿಯ ರಘು ಗೌಡ, ಚೇತನ್ ದುರ್ಗ, ನಾಟ್ಯ ರಂಗ, ಅಶ್ವಿನ್ ಹಾಸನ್ ಹಾಗೂ ಶಮಂತ್ ಊರೂಫ್ ಬ್ರೋ ಗೌಡ ಮತ್ತಿತರರು ತಾರಾಗಣದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com