ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬ: 'ವೀರಂ' ಟೀಸರ್ ಬಿಡುಗಡೆ 

ನಟ ಪ್ರಜ್ವಲ್ ದೇವರಾಜ್ ಅವರ ಜನ್ಮದಿನಾಚರಣೆ ಬೆನ್ನಲ್ಲೇ ಅವರ ಬಹು ನಿರೀಕ್ಷಿತ ಚಿತ್ರ 'ವೀರಂ' ಟೀಸರ್ ಬಿಡುಗಡೆಯಾಗಿದೆ.
ವೀರಂ ಚಿತ್ರದ ಟೀಸರ್
ವೀರಂ ಚಿತ್ರದ ಟೀಸರ್
Updated on: 

ಬೆಂಗಳೂರು: ನಟ ಪ್ರಜ್ವಲ್ ದೇವರಾಜ್ ಅವರ ಜನ್ಮದಿನಾಚರಣೆ ಬೆನ್ನಲ್ಲೇ ಅವರ ಬಹು ನಿರೀಕ್ಷಿತ ಚಿತ್ರ 'ವೀರಂ' ಟೀಸರ್ ಬಿಡುಗಡೆಯಾಗಿದೆ.

ಡಾಟರ್ ಆಫ್ ಪಾರ್ವತಮ್ಮ ಖ್ಯಾತಿಯ ಶಶಿಧರ್ ಅವರ ನಿರ್ಮಾಣ ಹಾಗೂ ಖದರ್ ಕುಮಾರ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‌ಚಿತ್ರ ‘ವೀರಂ’. ನಟ ಪ್ರಜ್ವಲ್ ದೇವರಾಜ್ ಹಿಂದೆಂದೂ ಕಾಣಿಸಿಕೊಳ್ಳದಂತಹ ವಿಭಿನ್ನ ಪಾತ್ರದಲ್ಲಿ ಮಿಂಚಲಿದ್ದಾರೆ. ಪ್ರಜ್ವಲ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಆನಂದ್ ಆಡಿಯೋ  ಮೂಲಕ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಇದೇ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಜೋಡಿಯಾಗಿ ಡಿಂಪಲ್‍ಕ್ವೀನ್ ರಚಿತಾರಾಮ್ ಅವರು ಕಾಣಿಸಿಕೊಂಡಿದ್ದಾರೆ.

ಈ ಚಿತ್ರದ ಮೂಲಕ ನಿರ್ದೇಶಕ ಖದರ್ ಕುಮಾರ್ ಅವರು ಹೊಸದೊಂದು ಕಂಟೆಂಟನ್ನು ಹೇಳಹೊರಟಿದ್ದಾರೆ. ಗೂಗ್ಲಿ, ಶಿವಲಿಂಗ, ಶ್ರಾವಣಿ ಸುಬ್ರಹ್ಮಣ್ಯ ಮುಂತಾದ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಖದರ್ ಕುಮಾರ್ ಈ ಚಿತ್ರದ ಮೂಲಕ ಮೊದಲಬಾರಿಗೆ ಸ್ವತಂತ್ರ  ನಿರ್ದೇಶಕರಾಗಿದ್ದಾರೆ.

ಇದೊಂದು ಮಾಸ್ ಎಂಟರ್‍ಟೈಮೆಂಟ್ ಕಥಾಹಂದರ ಹೊಂದಿರುವ ಚಿತ್ರ. ಒಂದು ಮಾಸ್ ಕಥೆಯನ್ನು ಎಮೋಷನಲ್ ಆಗಿಯೂ ಜನರಿಗೆ ತೋರಿಸಬಹುದು ಎಂದು ಈ ಚಿತ್ರದ ಮೂಲಕ ತೋರಿಸುತ್ತಿದ್ದೇವೆ ಎನ್ನುತ್ತಾರೆ ಚಿತ್ರದ ನಿರ್ಮಾಪಕ ಶಶಿಧರ್. ವಿಶೇಷವಾಗಿ ಈ ಸಿನಿಮಾದಲ್ಲಿ ಶ್ರೀನಗರ  ಕಿಟ್ಟಿ ಅವರು ವಿಶೇಷವಾದ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com