ಮತ್ತೊಮ್ಮೆ ಖಾಕಿ ಧರಿಸಿದ ಪ್ರಜ್ವಲ್ ದೇವರಾಜ್: 'ಮಾಫಿಯಾ' ಫಸ್ಟ್‌ ಲುಕ್‌ ರಿಲೀಸ್!

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ‘ಮಾಫಿಯಾ’ದ ಫಸ್ಟ್‌ಲುಕ್‌ ಬಿಡುಗಡೆ ಆಗಿದೆ. ಜುಲೈ 4 ಪ್ರಜ್ವಲ್‌ ಅವರ ಜನ್ಮದಿನವೂ ಹೌದು. ಕೇಕ್‌ ಕತ್ತರಿಸಿ ಅವರ ಹುಟ್ಟುಹಬ್ಬ ಆಚರಿಸಿದ ಚಿತ್ರತಂಡ ಚಿತ್ರದ ಮೋಷನ್‌ ಪೋಸ್ಟರ್‌ ಬಿಡುಗಡೆ ಮಾಡಿದೆ.
ಮಾಫಿಯಾ ಪೋಸ್ಟರ್
ಮಾಫಿಯಾ ಪೋಸ್ಟರ್
Updated on: 

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ‘ಮಾಫಿಯಾ’ದ ಫಸ್ಟ್‌ಲುಕ್‌ ಬಿಡುಗಡೆ ಆಗಿದೆ. ಜುಲೈ 4 ಪ್ರಜ್ವಲ್‌ ಅವರ ಜನ್ಮದಿನವೂ ಹೌದು. ಕೇಕ್‌ ಕತ್ತರಿಸಿ ಅವರ ಹುಟ್ಟುಹಬ್ಬ ಆಚರಿಸಿದ ಚಿತ್ರತಂಡ ಚಿತ್ರದ ಮೋಷನ್‌ ಪೋಸ್ಟರ್‌ ಬಿಡುಗಡೆ ಮಾಡಿದೆ. 

ಅಂಬಿ ನಿಂಗ್ ವಯಸ್ಸಾಯ್ತೋ ನಿರ್ದೇಶಕ ಗುರುದತ್‌ ಗಾಣಿಗ ಅವರು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ಅವರು ಈ ಚಿತ್ರ ನಿರ್ಮಿಸುತ್ತಿದ್ದಾರೆ. ಚಿತ್ರೀಕರಣ ಆಗಸ್ಟ್‌ನಲ್ಲಿ ಆರಂಭವಾಗಲಿದೆ. ಪ್ರಜ್ವಲ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ. ಡೈನಾಮಿಕ್ ಸ್ಟಾರ್ ದೇವರಾಜ್ ಕೂಡ ಅಭಿನಯಿಸುತ್ತಿದ್ದಾರೆ.

ಭಾನುವಾರ ನಟ ಶಿವರಾಜ್ ಕುಮಾರ್, ವಿಜಯ್ ಸೇತುಪತಿ ಮತ್ತು ಆರ್ಯ ಮಾಫಿಯಾ ಫಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ. ಪೊಲೀಸ್ ಸಮವಸ್ತ್ರ ಧರಿಸಿರುವ ಪ್ರಜ್ವಲ್ ದೇವರಾಜ್ ಅವರಿಗೆ ಹ್ಯಾಂಡ್ ಕಪ್ ಹಾಕಲಾಗಿದೆ.

ಮಾಫಿಯಾ ಸಿನಿಮಾ ಉತ್ಸಾಹಭರಿತ ಪೊಲೀಸ್ ಅಧಿಕಾರಿಯೊಬ್ಬರ ಕಥೆಯಾಗಿದೆ, ಸಮಾಜಕ್ಕೆ ಏನಾದರೂ ಒಳ್ಳೆಯದು ಮಾಡಬೇಕೆಂದು ಬಯಸುವ ಅಧಿಕಾರಿ ವ್ಯವಸ್ಥೆಯಲ್ಲಿ ಸಿಕ್ಕಿ ಹಾಕಿಕೊಳ್ಳುವ ಕಥೆ ಇದಾಗಿದೆ ಎಂದು ಗುರುದತ್ತ ಗಣಿಗ ತಿಳಿಸಿದ್ದಾರೆ. ಜುಲೈ 3ನೇ ವಾರದಿಂದ ಸಿನಿಮಾ ಶೂಟಿಂಗ್ ಆರಂಭವಾಗುವ ಸಾಧ್ಯತೆಯಿದ್ದು, ಉಳಿದ ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಮಾಫಿಯಾ ಸಿನಿಮಾ ಜೊತೆಗೆ ಪ್ರಜ್ವಲ್ ದೇವರಾಜ್ ಕೈಯ್ಯಲ್ಲಿ ಇನ್ನೂ ಹಲವು ಸಿನಿಮಾಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com