ಬಿಗ್ ಬಾಸ್ ಖ್ಯಾತಿಯ ನಯನಾ ಪುಟ್ಟಸ್ವಾಮಿಗೆ ಗಂಡು ಮಗು ಜನನ

ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ನಯನಾ ಪುಟ್ಟಸ್ವಾಮಿ ಅವರ ಮನೆಗೆ ಹೊಸ ಅತಿಥಿ ಆಗಮನವಾಗಿದ್ದು, ನಯನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆಂದು ತಿಳಿದುಬಂದಿದೆ.
ನಯನಾ ಪುಟ್ಟಸ್ವಾಮಿ
ನಯನಾ ಪುಟ್ಟಸ್ವಾಮಿ
Updated on

ಬೆಂಗಳೂರು: ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ನಯನಾ ಪುಟ್ಟಸ್ವಾಮಿ ಅವರ ಮನೆಗೆ ಹೊಸ ಅತಿಥಿ ಆಗಮನವಾಗಿದ್ದು, ನಯನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಸ್ವತಃ ನಯನಾ ಅವರೇ ಸಾಮಾಜಿಕ ಜಾಲತಾಣ ಇನ್‍ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಟ್ ಇಸ್ ಎ ಬಾಯ್ ಎಂದು ಬರೆದುಕೊಂಡು ಮಗುವಿನ ಕೈ ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಗಂಡು ಮಗು ಜನನವಾಗಿರುವುದನ್ನು ತಿಳಿಸಿದ್ದಾರೆ.

ನಯನಾ ಪುಟ್ಟಸ್ವಾಮಿ ಬಿಗ್ ಬಾಸ್ 6 ಹಾಗೂ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 1ರ ಮೂಲಕ ಸಹ ಜನಪ್ರಿಯರಾಗಿದ್ದಾರೆ.

ನಯನಾ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದು, ಸಿರಿಯಲ್‍ಗಳಲ್ಲಿ ಕೂಡ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಯನಾ ಅವರ ಪತಿ ಚರಣ್ ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವುದಿರಿಂದ ಅಲ್ಲಿಗೇ ಶಿಫ್ಟ್ ಆಗಿದ್ದಾರೆ.

ಇದೇ ವೇಳೆ ಅವರೂ ಸಹ ಫಿಲ್ಮ್ ಮೇಕಿಂಗ್ ಕೋರ್ಸ್ ಮಾಡುತ್ತಿದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ ಭಾರತಕ್ಕೆ ಮರಳಿ ಕನ್ನಡ ಚಿತ್ರರಂಗದಲ್ಲಿ ಸೇವೆ ಮಾಡಬೇಕೆಂಬ ಬಯಕೆಯನ್ನು ಕೂಡ ಈ ಹಿಂದೆ ನಯನಾ ತಿಳಿಸಿದ್ದರು.

ಇತ್ತೀಚೆಗಷ್ಟೇ ನಯನಾ ಅವರು ತಮ್ಮ ಪ್ರಗ್ನೆನ್ಸಿ ವಿಚಾರವನ್ನು ಕೂಡ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಇದೀಗ ಗಂಡು ಮಗು ಜನನವಾಗಿರುವ ಕುರಿತು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಸಂತಸದ ವಿಚಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com