ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಸಿನಿಮಾ ಹಾಗೂ ಧಾರಾವಾಹಿಗಳ ಚಿತ್ರೀಕರಣ ನಡೆಯುತ್ತಿದೆ ಎಂಬ ವದಂತಿಯನ್ನು ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ.
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 'ಮುದ್ದುಲಕ್ಷ್ಮಿ' ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪರಿಶೀಲನೆ ಕೈಗೊಂಡ ಪೊಲೀಸ್ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಲಾಕ್ ಡೌನ್ ಇರುವ ಕಾರಣ 'ಮುದ್ದುಲಕ್ಷ್ಮಿ' ಧಾರಾವಾಹಿ ತಂಡದ ಕೆಲ ಕಲಾವಿದರು ಈ ಮೊದಲು ಚಿತ್ರೀಕರಣ ನಡೆಯುತ್ತಿದ್ದ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಇವರೆಲ್ಲ ಚಿತ್ರದುರ್ಗ ಮತ್ತಿತರ ಜಿಲ್ಲೆಗೆ ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
Advertisement