ವರನಟ ಡಾ. ರಾಜ್ ಅವರ ಯೋಗಗುರು ಹೆಚ್.ಎಫ್. ನಾಯ್ಕರ್ ನಿಧನ

ವರನಟ ಡಾ. ರಾಜ್‌ಕುಮಾರ್ ಅವರ ಯೋಗಗುರುಗಳಾಗಿದ್ದ ಕೆಎಸ್‌ಆರ್‌ಪಿ ನಿವೃತ್ತ ಡಿಐಜಿ ಡಾ. ಹೊನ್ನಪ್ಪ ಫಕೀರಪ್ಪ ನಾಯ್ಕರ್ (85) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಎಚ್‌.ಎಫ್ ನಾಯ್ಕರ್
ಎಚ್‌.ಎಫ್ ನಾಯ್ಕರ್

ಬೆಂಗಳೂರು: ವರನಟ ಡಾ. ರಾಜ್‌ಕುಮಾರ್ ಅವರ ಯೋಗಗುರುಗಳಾಗಿದ್ದ ಕೆಎಸ್‌ಆರ್‌ಪಿ ನಿವೃತ್ತ ಡಿಐಜಿ ಡಾ. ಹೊನ್ನಪ್ಪ ಫಕೀರಪ್ಪ ನಾಯ್ಕರ್ (85) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಮೃತರು ಪತ್ನಿ ,ಮೂವರು ಪುತ್ರರು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

ಧಾರವಾಡದ ಕುಂದಗೋಳ ಮೂಲದವರಾಗಿದ್ದ ನಾಯ್ಕರ್ ಕಳೆದ ಐದು ದಶಕಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು, ಕನಕಪುರ ರಸ್ತೆ ಬಿ.ಎಂ.ಕಾವಲ್‌ನಲ್ಲಿ ಮಹಾಯೋಗಕ್ಷೇತ್ರ ಸ್ಥಾಪಿಸುವ ಮೂಲಕ ಡಾ.ರಾಜ್‌ಕುಮಾರ್ ಸೇರಿ ವಿವಿಧ ಕ್ಷೇತ್ರದ ಗಣ್ಯರಿಗೆ ಹಠಯೋಗದ ಸಾಧನೆ ಮಾಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com