ಕೋವಿಡ್ ಸಂಕಷ್ಟ: ಮುಗಿಲ್ ಪೇಟೆ'ಗೆ ದುಡಿದವರಿಗೆ ಕ್ರೇಜಿಸ್ಟಾರ್ ಪುತ್ರನಿಂದ ತಲಾ 5 ಸಾವಿರ ಧನ ಸಹಾಯ
ಬೆಂಗಳೂರು: ಕಳೆದೊಂದು ವರ್ಷದಿಂದ ಜಗತ್ತನ್ನು ಆವರಿಸಿರುವ ಕೊರೋನಾ ಸಂಕಷ್ಟಕ್ಕೆ ಅನೇಕ ಕುಟುಂಬಗಳು ನಲುಗಿ ಹೋಗಿದೆ. ಕನ್ನಡ ಸಿನೆಮಾ ಕಲಾವಿದರ ಕುಟುಂಬವು ಹೊರತಾಗಿಲ್ಲ. ಇಂತಹ ಕೆಲ ಕಲಾವಿದರಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಧನ ಸಹಾಯ ನೀಡಿದ್ದಾರೆ.
'ಬಹುತೇಕ ಕಲಾವಿದರು, ತಂತ್ರಜ್ಞರು ಮನೆಯಲ್ಲಿ ಸುರಕ್ಷಿತವಾಗಿದ್ದಾರೆಂದು ಭಾವಿಸಿರುತ್ತೇವೆ. ಆದರೆ ನನ್ನ ಅನೇಕ ಕಲಾವಿದ ಸ್ನೇಹಿತರು ಈ ಕೊರೋನ ಸಂದರ್ಭದಲ್ಲಿ ಜೀವನ ನಡೆಸುವುದಕ್ಕೆ ಕಷ್ಟಪಡುತ್ತಿದ್ದಾರೆ. ಹಾಗಾಗಿ ಈ ಸಮಯದಲ್ಲಿ ನನ್ನ ಸ್ನೇಹಿತರ ನೆರವಿಗೆ ನಿಲ್ಲಬೇಕಾದ್ದು ನನ್ನ ಕರ್ತವ್ಯ' ಎಂದು ಮನೋರಂಜನ್ ಹೇಳಿದ್ದಾರೆ.
ಸದ್ಯ ಮುಗಿಲ್ ಪೇಟೆ ಸಿನಿಮಾದಲ್ಲಿ ನಾನು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದೇನೆ. ನನ್ನ ಈ ಒಂದು ವರ್ಷದ ಪ್ರಾಜೆಕ್ಟ್ ನಲ್ಲಿ ನೂರಕ್ಕೂ ಹೆಚ್ಚು ಜನ ಕೆಲಸ ಮಾಡುತ್ತಿದ್ದಾರೆ. ನನ್ನ ಸಿನಿಮಾಕ್ಕಾಗಿ ತನುಮನವನ್ನು ಅರ್ಪಿಸಿದ್ದಾರೆ. ಈಗ ಅವರ ಸಂಕಷ್ಟಕಾಲದಲ್ಲಿ ಅವರ ಜೊತೆಗೆ ಅವರ ಕಷ್ಟಕ್ಕೆ ಹೆಗಲು ಕೊಡಬೇಕಾಗಿರುವುದು ನನ್ನ ಜವಾಬ್ದಾರಿ.
ಹೀಗಾಗಿ ಮುಗಿಲ್ ಪೇಟೆ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರಿಗೂ ನನ್ನ ಕಡೆಯಿಂದ 5 ಸಾವಿರ ಹಣವನ್ನು ಅವರ ಖಾತೆಗೆ ಜಮಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದು ನನ್ನವರಿಗಾಗಿ ಈ ಸಂದರ್ಭದಲ್ಲಿ ಕೈಲಾದ ಸಹಾಯ ಮಾಡುವ ಸಣ್ಣ ಪ್ರಯತ್ನ. ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ. ಸುರಕ್ಷಿತವಾಗಿರಿ ಎಂದು ಇದೇ ಸಂದರ್ಭದಲ್ಲಿ ಅವರು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ