ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಪ್ರಕಾಶ್ ರೈ ಕಪಾಳ ಮೋಕ್ಷ: ದೃಶ್ಯದ ಬಗ್ಗೆ ನೆಟ್ಟಿಗರ ಆಕ್ರೋಶ
ನವದೆಹಲಿ: ನಟ ಸೂರ್ಯ ಅಭಿನಯದ ತಮಿಳು ಸಿನಿಮಾ ಜೈ ಭೀಮ್ ಅಮೇಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಿದ್ದು ಎಲ್ಲರ ಮೆಚ್ಚುಗೆ ಗಳಿಸುತ್ತಿದೆ.
ಈಗ ಜೈ ಭೀಮ್ ಸಿನಿಮಾದ ಒಂದು ಸೀನ್ ಭಾರೀ ಚರ್ಚೆಗೆ ಗ್ರಾಸವಾಗಿದೆ. ವ್ಯಕ್ತಿಯೋರ್ವ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಪ್ರಕಾಶ್ ರೈ ಕಪಾಳ ಮೋಕ್ಷ ಮಾಡಿದ್ದಾರೆ. ಅಲ್ಲದೇ ತಮಿಳಿನಲ್ಲಿ ಮಾತಾಡು ಎಂದು ಆಗ್ರಹಿಸಿದ್ದಾರೆ. ಪ್ರಕಾಶ್ ರೈ ವ್ಯಕ್ತಿಯೊಬ್ಬರ ಕೆನ್ನೆಗೆ ಬಾರಿಸಿ ತಮಿಳಿನಲ್ಲೇ ಮಾತಾಡು ಎಂದಿರುವ ವಿಡಿಯೋ ಟ್ವಿಟ್ಟರ್ ನಲ್ಲಿ ವೈರಲ್ ಆಗುತ್ತಿದೆ.
ಪ್ರಕಾಶ್ ರೈ ನಟಿಸಿರುವ ಈ ವಿಡಿಯೋಗೆ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ, ಜೈ ಭೀಮ್’ ಚಿತ್ರದಲ್ಲಿ ದೃಶ್ಯವೊಂದು ಬರುತ್ತದೆ. ಈ ದೃಶ್ಯದಲ್ಲಿ ಪ್ರಕಾಶ್ ರಾಜ್ ಬಳಿ ಬರುವ ಅಟೆಂಡರ್ ಓರ್ವ ಹಿಂದಿಯಲ್ಲಿ ಮಾತನಾಡುತ್ತಾನೆ. ಈ ವೇಳೆ ಪ್ರಕಾಶ್ ರೈ ಕೆನ್ನೆಗೆ ಬಾರಿಸಿ ತಮಿಳಿನಲ್ಲಿ ಮಾತನಾಡುವಂತೆ ಸೂಚಿಸುತ್ತಾರೆ. ಇದೇ ದೃಶ್ಯವನ್ನು ಇಟ್ಟುಕೊಂಡು ಕೆಲವರು ಕೊಂಕು ತೆಗೆದಿದ್ದಾರೆ.
ಯಾವ ಭಾಷೆಯಲ್ಲಿ ಮಾತನಾಡಬೇಕು ಎನ್ನುವುದು ಅವರವರ ಇಷ್ಟ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಅಟೆಂಡರ್ ಹಿಂದಿ ಮಾತನಾಡಿದ ಎನ್ನುವ ಕಾರಣಕ್ಕೆ ಅವನಿಗೆ ಹೊಡೆಯುವ ಅಧಿಕಾರವನ್ನು ಪ್ರಕಾಶ್ ರೈಗೆ ಕೊಟ್ಟವರು ಯಾರು’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಕೆಲವರು ವಿರೊಧ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ