ಬಾಕ್ಸಿಂಗ್ ದಂತಕಥೆ ಮೈಕ್ ಟೈಸನ್ ಜೊತೆ ವಿಜಯ್ ದೇವರಕೊಂಡ 'ಲೈಗರ್' ಸಿನಿಮಾ ಶೂಟಿಂಗ್ ಶುರು

ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್ ಜೊತೆ ನಟಿಸುತ್ತಿರುವುದಕ್ಕೆ ತುಂಬಾ ಎಕ್ಸೈಟ್ ಆಗಿರುವ ವಿಜಯ್ ತಮ್ಮ ಹಾಗೂ ಮೈಕ್ ಜೊತೆಗಿನ ಫೋಟೊವನ್ನು ಹಂಚಿಕೊಂಡಿದ್ದಾರೆ. 
ಲೈಗರ್ ಸಿನಿಮಾ ಪೋಸ್ಟರ್
ಲೈಗರ್ ಸಿನಿಮಾ ಪೋಸ್ಟರ್
Updated on

ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ಲೈಗರ್ ಸಿನಿಮಾ ಶೂಟಿಂಗ್ ಪ್ರಯುಕ್ತ ಅಮೆರಿಕಕ್ಕೆ ತೆರಳಿದ್ದು, ಬಾಕ್ಸಿಂಗ್ ದಂತಕಥೆ ಮೈಕ್ ಟೈಸನ್ ಜೊತೆ ಪರದೆ ಹಂಚಿಕೊಳ್ಳಲಿದ್ದಾರೆ.

ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್ ಜೊತೆ ನಟಿಸುತ್ತಿರುವುದಕ್ಕೆ ತುಂಬಾ ಎಕ್ಸೈಟ್ ಆಗಿರುವ ವಿಜಯ್ ತಮ್ಮ ಹಾಗೂ ಮೈಕ್ ಜೊತೆಗಿನ ಫೋಟೊವನ್ನು ಹಂಚಿಕೊಂಡಿದ್ದಾರೆ. 

ಬಾಲಿವುಡ್ ನ ಧರ್ಮ ಪ್ರೊಡಕ್ಷನ್ ಲೈಗರ್ ಸಿನಿಮಾ ನಿರ್ಮಿಸುತ್ತಿದೆ. ಸಿನಿಮಾದಲ್ಲಿ ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. 

20ನೇ ವಯಸ್ಸಿನಲ್ಲೇ ಬಾಕ್ಸಿಂಗ್ ಹೆವಿವೇಯ್ಟ್ ಚಾಂಪಿಯನ್ ಶಿಪ್ ಗೆದ್ದ ಮೈಕ್ ಟೈಸನ್ ಸಾರ್ವಕಾಲಿಕ ಶ್ರೇಷ್ಠ ಬಾಕ್ಸರ್ ಎಂದೇ ಪ್ರಖ್ಯಾತಿ ಪಡೆದಿದ್ದಾರೆ. ಆತ ತೆಲುಗು ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. 

ಲೈಗರ್ ಸಿನಿಮಾ 5 ಭಾಷೆಗಳಲ್ಲಿ ತೆರ ಕಾಣಲಿದ್ದು, ಸೆಪ್ಟೆಂಬರ್ ವೇಳೆಗೆ ಸಿನಿಮಾ ಬಿಡುಗಡೆಗೊಳ್ಳಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿತ್ತು. ಪುರಿ ಜಗನ್ನಾಥ್ ಅವರು ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com