'ಅಪ್ಪು ಅವರ ಕನಸೊಂದನ್ನು ಸಾಕಾರಗೊಳಿಸಲು ಮುಂದಾಗಿದ್ದೇವೆ, ನಿಮ್ಮ ಸಹಕಾರ ಎಂದಿನಂತಿರಲಿ': ಅಶ್ವಿನಿ ಪುನೀತ್ ರಾಜ್ ಕುಮಾರ್

ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್​ ಕಳೆದ ತಿಂಗಳು(ಅ.29) ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾದರು.
ಅಮೋಘ ವರ್ಷ ಜೊತೆ ಪುನೀತ್ ರಾಜ್ ಕುಮಾರ್ ಗಂಧದ ಗುಡಿ ಡಾಕ್ಯುಮೆಂಟರಿ ತಯಾರಿ ಸಂದರ್ಭದಲ್ಲಿ(ಸಂಗ್ರಹ ಚಿತ್ರ)
ಅಮೋಘ ವರ್ಷ ಜೊತೆ ಪುನೀತ್ ರಾಜ್ ಕುಮಾರ್ ಗಂಧದ ಗುಡಿ ಡಾಕ್ಯುಮೆಂಟರಿ ತಯಾರಿ ಸಂದರ್ಭದಲ್ಲಿ(ಸಂಗ್ರಹ ಚಿತ್ರ)
Updated on

ಬೆಂಗಳೂರು: ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್​ ಕಳೆದ ತಿಂಗಳು(ಅ.29) ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾದರು. ಅವರು ಬದುಕಿದ್ದಾಗ ಕಂಡಿದ್ದ ಕನಸುಗಳು ಅನೇಕ, ಕನ್ನಡ ಚಿತ್ರರಂಗದಲ್ಲಿ ಹೊಸ ತಂತ್ರಜ್ಞಾನ ತರುವ, ಹೊಸ ಹೊಸ ಕಥೆಯನ್ನು ಸಿನಿಮಾ ಮೂಲಕ ತೆರೆ ಮೇಲೆ ತರುವ, ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಕನಸು ಕಂಡಿದ್ದರು ಮತ್ತು ಅದಕ್ಕಾಗಿ ಮನಸ್ಸು ತುಡಿಯುತ್ತಾ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದರು, ಆದರೆ ಅವೆಲ್ಲ ಪೂರ್ಣಗೊಳ್ಳುವ ಮೊದಲೇ ಇಹಲೋಕ ತ್ಯಜಿಸಿದ್ದಾರೆ.

ಆದರೆ ಅವರ ಕನಸುಗಳನ್ನು ಮುಂದಕ್ಕೆ ಕೊಂಡೊಯ್ದು ನನಸಾಗಿಸುವ ಪ್ರಯತ್ನವನ್ನು ಅವರ ಪತ್ನಿ ಅಶ್ವಿನಿ ಮತ್ತು ಕುಟುಂಬಸ್ಥರು ಮಾಡುತ್ತಿದ್ದಾರೆ. ಪಿಆರ್​ಕೆ ಪ್ರೊಡಕ್ಷನ್​ ಹೌಸ್​ ಮೂಲಕ ಮಹತ್ವದ ವಿಚಾರವೊಂದನ್ನು ಅಶ್ವಿನಿಯವರು ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ಘೋಷಿಸಿದ್ದಾರೆ. 

ಅಮೋಘ ವರ್ಷ ಅವರ ಜೊತೆ ಸೇರಿ ‘ವೈಲ್ಡ್​ ಕರ್ನಾಟಕ’ ಎಂಬ ಡಾಕ್ಯುಮೆಂಟರಿ ಸಿದ್ದಪಡಿಸಿದ್ದರು ಪುನೀತ್ ರಾಜ್ ಕುಮಾರ್, ಅದಕ್ಕೆ ಗಂಧದ ಗುಡಿ ಎಂದು ಹೆಸರನ್ನು ಕೂಡ ಕೊಟ್ಟಿದ್ದರು.​ ರಾಜ್ಯದ ಹಲವು ಸ್ಥಳಗಳಲ್ಲಿ ಶೂಟ್ ಮಾಡಲಾಗಿತ್ತು. ಪುನೀತ್​ ಕೂಡ ಇದರಲ್ಲಿ ಕಾಣಿಸಿಕೊಂಡಿದ್ದಾರೆ. 

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕೈಯಿಂದ ಡಾಕ್ಯುಮೆಂಟರಿಯ ಟೀಸರ್ ಬಿಡುಗಡೆಯಾಗಬೇಕಿತ್ತು. ಈಗ ಅದನ್ನು ಬಿಡುಗಡೆ ಮಾಡಲು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಮುಂದಾಗಿದ್ದು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ ಎಂದಿದ್ದಾರೆ. 

ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್​ ಪೋಸ್ಟ್ ಮಾಡಿದ್ದರು. ಅಲ್ಲದೆ, ನವೆಂಬರ್​ 1ಕ್ಕಾಗಿ ಕಾಯಿರಿ ಎಂದು ಹೇಳಿದ್ದರು. ಆ ಸಮಯ ಈಗ ಬಂದಿದೆ.

ಈ ವಿಚಾರದ ಕುರಿತು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಟ್ವೀಟ್​ ಮಾಡಿ, ‘ಅಪ್ಪು ಅವರ ಕನಸನ್ನು ನನಸು ಮಾಡಲು ಹೊರಟಿದ್ದೇವೆ, ನಿಮ್ಮ ಸಹಕಾರ ಬೇಕು ಎಂದು ಕೇಳಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com