ವಿಚ್ಛೇದನದ ಬಳಿಕ ಹಾಲಿವುಡ್ ಗೆ ಹಾರಿದ ನಟಿ ಸಮಂತಾ ರುತ್ ಪ್ರಭು

ಬೆಂಗಳೂರು: ನಟ ನಾಗ ಚೈತನ್ಯರಿಂದ ವಿಚ್ಛೇದನ ಪಡೆದುಕೊಂಡ ಬಳಿಕ ಚಿತ್ರರಂಗದಿಂದ ತುಸು ವಿರಾಮ ಪಡೆದಿದ್ದ ನಟಿ ಸಮಂತಾ ರುತ್ ಪ್ರಭು ಮತ್ತೆ ಸಿನಿಮಾ ಕ್ಷೇತ್ರಕ್ಕೆ ಮರಳಿದ್ದಾರೆ.
'ಅರೇಂಜ್‌ಮೆಂಟ್ಸ್ ಆಫ್ ಲವ್' ಎಂಬ ಚೊಚ್ಚಲ ಹಾಲಿವುಡ್ ಚಿತ್ರದಲ್ಲಿ ಸಮಂತಾ ಅವರು ತಮಿಳು ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ನಿರ್ದೇಶಕ ಫಿಲಿಪ್ ಜಾನ್ ಜತೆಗೆ ಫೋಟೊ ಒಂದನ್ನು ಸಮಂತಾ ಅವರು ಪೋಸ್ಟ್ ಮಾಡಿದ್ದು, ಹೊಸ ಸಿನಿಮಾದ ಪೋಸ್ಟರ್ ಅನ್ನು ಕೂಡ ಶೇರ್ ಮಾಡಿಕೊಳ್ಳುವ ಮೂಲಕ ಹಾಲಿವುಡ್‌ಗೆ ತೆರಳುತ್ತಿರುವ ಬಗ್ಗೆ ದೃಢಪಡಿಸಿದ್ದಾರೆ. ಹೊಸ ಜಗತ್ತು, ಹೊಸ ಕೆಲಸಕ್ಕೆ ತೆರೆದುಕೊಳ್ಳುತ್ತಿದ್ದೇನೆ. ವಿಶೇಷ ಅವಕಾಶವೊಂದು ನನ್ನ ಪಾಲಿಗೆ ಬಂದಿದೆ ಎಂದು ಸಮಂತಾ ಹೇಳಿಕೊಂಡಿದ್ದಾರೆ.
ಈ ಹಿಂದೆ ಸಮಂತಾ ನಟಿಸಿದ್ದ ‘ಓಹ್ ಬೇಬಿ’ ಸಿನಿಮಾವನ್ನು ನಿರ್ಮಾಣ ಮಾಡಿದ್ದ ‘ಗುರು ಫಿಲ್ಮ್ಸ್’ ಬ್ಯಾನರ್ ಮೂಲಕವೇ ‘ಅರೇಂಜ್‌ಮೆಂಟ್ಸ್ ಆಫ್ ಲವ್’ ಸಿನಿಮಾ ತಯಾರಾಗಲಿದೆ. ಅದೇ ಶೀರ್ಷಿಕೆಯ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರಲಿದೆ.
ಇದು ನನಗೆ ಹೊಸ ಪ್ರಪಂಚ. ನಾನು ಕೊನೆ ಬಾರಿಗೆ ಆಡಿಷನ್ ನೀಡಿದ್ದು 2009ರಲ್ಲಿ ‘ಏ ಮಾಯ ಚೇಸಾವೆ’ ಚಿತ್ರಕ್ಕಾಗಿ. 12 ವರ್ಷಗಳ ಬಳಿಕ ಮತ್ತೆ ಆಡಿಷನ್ ನೀಡಿದ್ದೇನೆ. ಮತ್ತೆ ಅದೇ ರೀತಿ ನರ್ವಸ್ ಆಗಿದ್ದೇನೆ. ಫಿಲಿಪ್ ಜಾನ್ ಜೊತೆ ಕೆಲಸ ಮಾಡುವುದು ತುಂಬ ಅಪರೂಪದ ಅವಕಾಶ. ಈ ಪಾತ್ರಕ್ಕೆ ಆಯ್ಕೆ ಆಗಿರುವುದು ತುಂಬ ಖುಷಿ ಆಗುತ್ತಿದೆ. ಈ ಪಯಣ ಆರಂಭಿಸಲು ಕಾತರದಿಂದ ಕಾಯುತ್ತಿದ್ದೇನೆ’ ಎಂದು ಸಮಂತಾ ಹೇಳಿದ್ದಾರೆ. ಆಗಸ್ಟ್ 2022 ರಂದು ಸಿನಿಮಾ ಸೆಟ್ಟೇರುವ ನಿರೀಕ್ಷೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


