ಚಾರ್ಮಿ ಕೌರ್
ಸಿನಿಮಾ ಸುದ್ದಿ
ಟಾಲಿವುಡ್ ಡ್ರಗ್ಸ್ ಪ್ರಕರಣ: ಇಡಿ ಅಧಿಕಾರಿಗಳಿಂದ ನಟಿ ಚಾರ್ಮಿ ಕೌರ್ ವಿಚಾರಣೆ ಅಂತ್ಯ
ಟಾಲಿವುಡ್ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿರುವ ಡ್ರಗ್ಸ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಇದ್ದಕ್ಕಿದ್ದಂತೆ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.
ಹೈದರಾಬಾದ್: ಟಾಲಿವುಡ್ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿರುವ ಡ್ರಗ್ಸ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಇದ್ದಕ್ಕಿದ್ದಂತೆ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.
ಈಗಾಗಲೇ ಸುಪ್ರಸಿದ್ದ ತೆಲುಗು ಚಿತ್ರ ನಿರ್ದೇಶಕ ಪೂರಿ ಜಗನ್ನಾಥ್(ಕನ್ನಡದಲ್ಲಿ ಅಪ್ಪು ಚಿತ್ರವನ್ನು ನಿರ್ದೇಶಿಸಿದ್ದರು) ಅವರನ್ನು ಈಗಾಗಲೇ ವಿಚಾರಣೆ ನಡೆಸಿದ್ದು, ನಟಿ ಚಾರ್ಮಿ ಕೌರ್ ಅವರನ್ನು ಗುರುವಾರ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ 2015ರಿಂದ 2017ರವರೆಗಿನ ಬ್ಯಾಂಕಿನ ವಹಿವಾಟುಗಳ ವಿವರಗಳನ್ನು ಆಕೆ ಇಡಿಗೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ವಿಚಾರಣೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಚಾರ್ಮಿ, ಇಡಿ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದಾಗಿ ಹೇಳಿದ್ದು ಅಲ್ಲದೆ ಅವರು ಕೇಳಿದ ಎಲ್ಲ ದಾಖಲೆಗಳನ್ನು ಸಲ್ಲಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇಡಿಗೆ ಸಂಪೂರ್ಣ ಸಹಕರಿಸುತ್ತೇನೆ. ಮತ್ತೊಮ್ಮೆ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ