ಸಿನಿಮಾ ಸುದ್ದಿ

ಗಣೇಶ ಚತುರ್ಥಿಗೆ ದರ್ಶನ್ ನಟನೆಯ 55ನೇ ಸಿನಿಮಾ ಟೈಟಲ್ ರಿವೀಲ್!

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹುನಿರೀಕ್ಷಿತ 55ನೇ ಸಿನಿಮಾದ ಶೀರ್ಷಿಕೆ ಗಣೇಶ ಚತುರ್ಥಿಯಂದು ಅನಾವರಣಗೊಳ್ಳಲಿದೆ.

ಗಣೇಶ ಚತುರ್ಥಿಗೆ ದರ್ಶನ್ ನಟನೆಯ 55ನೇ ಸಿನಿಮಾ ಟೈಟಲ್ ರಿವೀಲ್!
ದರ್ಶನ್
Published On :

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹುನಿರೀಕ್ಷಿತ 55ನೇ ಸಿನಿಮಾದ ಶೀರ್ಷಿಕೆ ಗಣೇಶ ಚತುರ್ಥಿಯಂದು ಅನಾವರಣಗೊಳ್ಳಲಿದೆ. 

2019ರಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಿದ್ದ ‘ಯಜಮಾನ’ ಚಿತ್ರತಂಡವು ಡಿ55 ಸಿನಿಮಾದ ಮೂಲಕ ಇದೀಗ ಮತ್ತೆ ಒಂದಾಗುತ್ತಿದ್ದು, ಸಿನಿಮಾವನ್ನು ಶೈಲಜಾ ನಾಗ್‌ ಹಾಗೂ ಬಿ.ಸುರೇಶ್‌ ನಿರ್ಮಾಣ ಮಾಡುತ್ತಿದ್ದು, ವಿ.ಹರಿಕೃಷ್ಣ ನಿರ್ದೇಶಿಸಲಿದ್ದಾರೆ. ದರ್ಶನ್‌ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಶೀರ್ಷಿಕೆ ಅನಾವರಣದ ಬಗ್ಗೆ ಮಾಹಿತಿ ನೀಡಿದ್ದಾರೆ.

ಚಿತ್ರಕಥೆ, ನಿರ್ದೇಶನ ಹಾಗೂ ದರ್ಶನ್‌ ಅವರ ಭರ್ಜರಿ ಡೈಲಾಗ್‌ಗಳು ಹಾಗೂ ಸಾಹಸ ದೃಶ್ಯಗಳಿಂದ ‘ಯಜಮಾನ’ ಚಿತ್ರ ಯಶಸ್ಸು ಕಂಡಿತ್ತು. ನಿರ್ದೇಶನದ ಜೊತೆಗೆ ವಿ. ಹರಿಕೃಷ್ಣ ಅವರ ಸಂಗೀತ ಸಂಯೋಜನೆಯಿದ್ದ ಈ ಚಿತ್ರದ ಎಲ್ಲಾ ಹಾಡುಗಳು ಹಿಟ್‌ ಆಗಿದ್ದವು. 

2021ರ ಮಾರ್ಚ್‌ನಲ್ಲಿ ತೆರೆಕಂಡ ‘ರಾಬರ್ಟ್‌’ ದರ್ಶನ್‌ ನಟನೆಯ 53ನೇ ಸಿನಿಮಾ. ಪ್ರಸ್ತುತ ದರ್ಶನ್, ಎಸ್‌.ವಿ. ರಾಜೇಂದ್ರಸಿಂಗ್‌ ಬಾಬು ನಿರ್ದೇಶಿಸಿರುವ ‘ರಾಜವೀರ ಮದಕರಿ ನಾಯಕ’ ದರ್ಶನ್ 54ನೇ ಸಿನಿಮಾವಾಗಿದೆ. ರಾಕ್ ಲೈನ್ ವೆಂಕಟೇಶ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.