ಇಂದ್ರಜಿತ್ ಲಂಕೇಶ್
ಇಂದ್ರಜಿತ್ ಲಂಕೇಶ್

ಡ್ರಗ್ಸ್ ಪ್ರಕರಣದಲ್ಲಿ ಯೂರಿನ್, ರಕ್ತ ಪರೀಕ್ಷೆ ಮಾಡಿದರೆ ಸಾಲದು; ಕೂದಲು ಸ್ಯಾಂಪಲ್ ಟೆಸ್ಟ್ ಮಾಡಬೇಕು: ಇಂದ್ರಜಿತ್ ಲಂಕೇಶ್

ಕನ್ನಡ ಚಿತ್ರರಂಗದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಯೂರಿನ್ ಹಾಗೂ ರಕ್ತ ಪರೀಕ್ಷೆ ಮಾಡಿಸಿದರೆ ಸಾಲದು. ಕೂದಲ ಸ್ಯಾಂಪಲ್ ಟೆಸ್ಟ್ ಮಾಡಬೇಕು ಎಂದು ನಿರ್ಮಾಪಕ ಇಂದ್ರಜಿತ್ ಲಂಕೇಶ್ ಆಗ್ರಹಿಸಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಯೂರಿನ್ ಹಾಗೂ ರಕ್ತ ಪರೀಕ್ಷೆ ಮಾಡಿಸಿದರೆ ಸಾಲದು. ಕೂದಲ ಸ್ಯಾಂಪಲ್ ಟೆಸ್ಟ್ ಮಾಡಬೇಕು ಎಂದು ನಿರ್ಮಾಪಕ ಇಂದ್ರಜಿತ್ ಲಂಕೇಶ್ ಆಗ್ರಹಿಸಿದ್ದಾರೆ.

ಡ್ರಗ್ಸ್ ಪ್ರಕರಣದ ಎ2 ಕಿಶೋರ್ ಹೇಳಿಕೆ ಅನ್ವಯ ಸ್ಯಾಂಡಲ್ ವುಡ್ ನಟಿ, ಆ್ಯಂಕರ್ ಅನುಶ್ರೀ ಹೆಸರನ್ನು ಸಿಸಿಬಿ ಪೊಲೀಸರು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ಪ್ರಕರಣದಲ್ಲಿ ರಾಜಕೀಯ, ಚಿತ್ರರಂಗ, ಸಾಮಾಜಿಕ ಸೇರಿ ಹಲವಾರು ಆಯಾಮಗಳಿವೆ. ಆದ್ದರಿಂದಲೇ ಇದು ನಮ್ಮ ರಾಜ್ಯದ ಇತಿಹಾಸದಲ್ಲೇ ಇದು ಅತ್ಯಂತ ದೊಡ್ಡ ಸ್ಕ್ಯಾಂಡಲ್ ಎಂದು ಅವರು ಗಂಭೀರವಾಗಿ ಆರೋಪಿಸಿದರು.

ಕರ್ನಾಟಕದ ಡ್ರಗ್ಸ್ ಜಾಲದ ಬಗ್ಗೆ ಈ ಹಿಂದೆ ಮಾತನಾಡಿದ್ದೆ. ಹಲವರು ನನ್ನ ಬೆನ್ನುತಟ್ಟಿದ್ದರು, ಕೆಲವರು ಟೀಕೆ ಸಹ ಮಾಡಿದ್ದರು. ಆದರೆ, ಇದು ಒನ್ ಡೇ ಮ್ಯಾಚ್ ಅಲ್ಲ. ಡ್ರಗ್ಸ್ ವಿರುದ್ಧ ನಿರಂತರ ಕಾರ್ಯಾಚರಣೆ ಅಗತ್ಯವಾಗಿದ್ದು,
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಯಾರನ್ನು ವಿಚಾರಣೆಗೆ ಒಳಪಡಿಸಲಾಗಿತ್ತೋ ಅವರಿಗೆ ಯಾವುದೇ ರೀತಿಯ ಭಯವಿಲ್ಲ. ಕೊರೊನಾ ಎರಡನೇ ಅಲೆಯ ಬಳಿಕ ಅವರು ಮತ್ತೆ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಸಿಸಿಬಿ ಪೊಲೀಸರು ಬಂಧಿತರ ಹೆಸರನ್ನು ಹೇಳಿದ್ದರೂ ಏಕೆ ಪರೀಕ್ಷೆ ಮಾಡಿಸಿಲ್ಲ ಎಂದು ಇದೇ ವೇಳೆ ಪ್ರಶ್ನಿಸಿದರು. ಸಿಸಿಬಿ ಪೊಲೀಸರಿಗೆ ನನ್ನ ಬಳಿ ಇದ್ದ ಎಲ್ಲ ಮಾಹಿತಿ ನೀಡಿದ್ದೆ. ಯೂರಿನ್, ರಕ್ತ ಪರೀಕ್ಷೆ ಮಾಡಿದರೆ ಸಾಕಾಗುವುದಿಲ್ಲ. ಕೂದಲ ಸ್ಯಾಂಪಲ್ ಪರೀಕ್ಷೆ ಮಾಡಬೇಕು ಎಂದು ಹೇಳಿದ್ದೆ. ಆದರೆ, ಕೆಲವರಿಗೆ ಬೆಣ್ಣೆ, ಕೆಲವರಿಗೆ ಸುಣ್ಣ ಎಂಬಂತೆ ಪರೀಕ್ಷೆ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ಕಾನೂನಾತ್ಮಕವಾಗಿ ಡ್ರಗ್ಸ್ ಪೆಡ್ಲರ್​ಗೆ ಶಿಕ್ಷೆ ಜಾಸ್ತಿ ಇದೆ. ಆದರೆ, ಡ್ರಗ್ಸ್ ಸೇವನೆ ಮಾಡಿದವರಿಗೆ ಕಡಿಮೆ ಪ್ರಮಾಣದ ಶಿಕ್ಷೆ ಇದೆ. ಡ್ರಗ್ಸ್ ಸೇವನೆ ಮಾಡಿದವರನ್ನು ಪುನರ್ವಸತಿಗೂ ಕಳಿಸುವ ವ್ಯವಸ್ಥೆಯಿದೆ. ಆದರೆ, ಡ್ರಗ್ಸ್ ಪೆಡ್ಲಿಂಗ್ ಎಂಬುದು ಬಹುದೊಡ್ಡ ಮಾಫಿಯಾ ಎಂದರು.

ಕಿಶೋರ್ ಶೆಟ್ಟಿ ಆ್ಯಂಕರ್ ಅನುಶ್ರೀ ಬಗ್ಗೆ ಹೇಳಿಕೆ ಕೊಟ್ಟ ತಕ್ಷಣ ತನಿಖೆ ಮಾಡಬೇಕಾಗಿತ್ತು. ಆದರೆ, ಮಾಡಿಲ್ಲ. ಆದ್ದರಿಂದಲೇ ನ್ಯಾಯಾಲಯದಲ್ಲಿ ಪ್ರಕರಣಗಳು ಫೇಲ್ ಆಗುವುದು ಎಂದು ಅವರು ಅಸಮಾಧಾನ ಹೊರಹಾಕಿದರು.

X

Advertisement

X
Kannada Prabha
www.kannadaprabha.com