ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಜೇಮ್ಸ್ ನಲ್ಲಿ ಪ್ರಿಯಾ ಆನಂದ್ ನಟಿಸುತ್ತಿದ್ದಾರೆ.
ಚಿತ್ರದಲ್ಲಿ ಪ್ರಿಯಾ ಆನಂದ್ ಶ್ರೀಮಂತ ಕುಟುಂಬದ ಸದಸ್ಯೆಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ, ಆ್ಯಕ್ಷನ್ ಕಮರ್ಷಿಯಲ್ ಸಿನಿಮಾದಲ್ಲಿ ನಿಶಾ ಗಾಯಕ್ ವಾಡ್ ಎಂಬ ಪಾತ್ರ.
ಪ್ರಿಯಾ ಆನಂದ್ ಹುಟ್ಟು ಹಬ್ಬದ ಸಲುವಾಗಿ ಜೇಮ್ಸ್ ಚಿತ್ರ ತಂಡ ಪೋಸ್ಟರ್ ರಿಲೀಸ್ ಮಾಡಿದೆ. ಪೋಸ್ಟರ್ ನಲ್ಲಿ ಪ್ರಿಯಾ ಸೆಲ್ಲೋ ಹಿಡಿದುಕೊಂಡಿದ್ದಾರೆ, ಈ ಹಿಂದೆ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಆರೇಂಜ್ ಸಿನಿಮಾದಲ್ಲಿ ನಟಿಸಿದ್ದ ಪ್ರಿಯಾ ಸಂತೋಷ್ ಆನಂದ್ ರಾಮ್ ನಿರ್ದೇಶನದ ರಾಜಕುಮಾರ ಚಿತ್ರದಲ್ಲಿ ಅಪ್ಪುಗೆ ಜೋಡಿಯಾಗಿದ್ದರು, ಈಗ ಮತ್ತೆ ಚೇತನ್ ಕುಮಾರ್ ನಿರ್ದೇಶನದ ಜೇಮ್ಸ್ ನಲ್ಲಿ ಒಂದಾಗಿದ್ದಾರೆ.
ಜುಲೈ ತಿಂಗಳಲ್ಲಿ ಚೇತನ್ ಕುಮಾರ್ ಜೇಮ್ಸ್ ಚಿತ್ರೀಕರಣ ಆರಂಭಿಸಿದರು. ಮುಂದಿನ ಕೆಲವು ದಿನಗಳಲ್ಲಿ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಪ್ರಮುಖ ಚೇಸಿಂಗ್ ದೃಶ್ಯ ಮತ್ತು ಹಾಡುಗಳ ಚಿತ್ರೀಕರಣ ಬಾಕಿ ಉಳಿದಿದೆ.
ಕಿಶೋರ್ ಪತ್ತಿಕೊಂಡ ನಿರ್ಮಾಣದ ಸಿನಿಮಾದಲ್ಲಿ ತೆಲುಗು ನಟ ಮೆಕಾ ಶ್ರೀಕಾಂತ್ ಅನು ಪ್ರಭಾಕರ್, ರಂಗಾಯಣ ರಘು ಮತ್ತು ಮುಖೇಶ್ ರಿಷಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
Advertisement