ಏಪ್ರಿಲ್ 5 ರಿಂದ 'ಮದಗಜ' 4ನೇ ಹಂತದ ಚಿತ್ರೀಕರಣ ಆರಂಭ

ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಮದಗಜ ಚಿತ್ರದ 4ನೇ ಹಂತದ ಚಿತ್ರೀಕರಣ ಏಪ್ರಿಲ್ 5ರಿಂದ ಆರಂಭಗೊಳ್ಳಲಿದೆ. 

Published: 03rd April 2021 12:43 PM  |   Last Updated: 03rd April 2021 01:12 PM   |  A+A-


Sriimurali

ಶ್ರೀಮುರಳಿ

Posted By : Manjula VN
Source : The New Indian Express

ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಮದಗಜ ಚಿತ್ರದ 4ನೇ ಹಂತದ ಚಿತ್ರೀಕರಣ ಏಪ್ರಿಲ್ 5 ರಿಂದ ಆರಂಭಗೊಳ್ಳಲಿದೆ.

ಕಂಠೀರವ ಸ್ಟುಡಿಯೋದಲ್ಲಿ ಈಗಾಗಲೇ ಚಿತ್ರದ ತಂಡ ಬೀಡು ಬಿಟ್ಟಿದ್ದು, ಚಿತ್ರೀಕರಣಕ್ಕೆ ಸಿದ್ಧತೆಗಳನ್ನು ನಡೆಸುತ್ತಿದೆ. ಈಗಾಗಲೇ ಚಿತ್ರದ ಶೇ.90 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಎರಡು ಹಾಡು ಹಾಗೂ ಫೈಟಿಂಗ್ ದೃಶ್ಯಗಳ ಚಿತ್ರೀಕರಣ ಬಾಕಿ ಇದೆ ಎನ್ನಲಾಗಿದೆ. 

‘ಅಯೋಗ್ಯ’ ಚಿತ್ರದ ಯಶಸ್ಸಿನ ಬಳಿಕ ಮಹೇಶ್ ಗೌಡ ಅವರು ಮದಗಜ ಪ್ರಾಜೆಕ್ಟ್ ಕೈಗೆತ್ತುಕೊಂಡಿದ್ದು, ಚಿತ್ರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರು ನಟಿಸುತ್ತಿರುವುದು ನಿರೀಕ್ಷೆಗಳನ್ನು ಹೆಚ್ಚಿಸಿದೆ. 

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರೇ ಮದಗಜ ಚಿತ್ರಕ್ಕೂ ಬಂಡವಾಳ ಹೂಡಿರುವುದು ವಿಶೇಷವಾಗಿದೆ. ಸದ್ಯ ಈ ಚಿತ್ರದಲ್ಲಿ ಶ್ರೀಮುರಳಿಗೆ ಆಶಿಕಾ ರಂಗನಾಥ್ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ದಯಾವಾಣಿಯವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆಗಳಿವೆ. 

ಮದಗಜ ಚಿತ್ರ ತೆಲುಗಿನಲ್ಲಿಯೂ ಬಿಡುಗಡೆಗೆ ಸಜ್ಜಾಗಿದೆ. ಇದಲ್ಲದೆ. ಹಿಂದಿಯಲ್ಲಿಯೂ ಚಿತ್ರ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಈಗಾಗಲೇ ಚಿತ್ರದ ಡಬ್ಬಿಂಗ್ ಹಕ್ಕು ಭಾರೀ ಮೊತ್ತಕ್ಕೆ ಮಾರಾಟವಾಗಿದೆ ಎಂದು ಹೇಳಲಾಗುತ್ತಿದೆ. 

Stay up to date on all the latest ಸಿನಿಮಾ ಸುದ್ದಿ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp