ಏಪ್ರಿಲ್ 7ರ ನಂತರವೂ ಶೇ 100ರಷ್ಟು ಪ್ರೇಕ್ಷಕರಿಗೆ ಅವಕಾಶ: ಸಿಎಂ ಜೊತೆ ಚರ್ಚಿಸಿ ತೀರ್ಮಾನ- ಸುಧಾಕರ್

ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಏ.7ರವರೆಗೆ ಮಾತ್ರ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟುಗಳ ಭರ್ತಿಗೆ ನೀಡಿರುವ ಅವಧಿಯನ್ನು ವಿಸ್ತರಿಸುವಂತೆ ಚಿತ್ರ ನಿರ್ಮಾಪಕರ ನಿಯೋಗವಿಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

Published: 06th April 2021 01:47 PM  |   Last Updated: 06th April 2021 02:28 PM   |  A+A-


K.sudhakar

ಕೆ.ಸುಧಾಕರ್

Posted By : Shilpa D
Source : UNI

ಬೆಂಗಳೂರು: ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಏ.7ರವರೆಗೆ ಮಾತ್ರ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟುಗಳ ಭರ್ತಿಗೆ ನೀಡಿರುವ ಅವಧಿಯನ್ನು ವಿಸ್ತರಿಸುವಂತೆ ಚಿತ್ರ ನಿರ್ಮಾಪಕರ ನಿಯೋಗವಿಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಸದಾಶಿವನಗರದ ಸುಧಾಕರ್ ನಿವಾಸಕ್ಕೆ ಭೇಟಿ ನೀಡಿ ಒತ್ತಾಯಿಸಿರುವ ನಿರ್ಮಾಪಕರ ಸಂಘದ ಸದಸ್ಯರು, ಏ.7ರವರೆಗೆ ಮಾತ್ರ ನೂರಕ್ಕೆ ನೂರರಷ್ಟು ಚಿತ್ರಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಕೋವಿಡ್‌ನಿಂದಾಗಿ ಈಗಾಗಲೇ ನಿರ್ಮಾಪಕರು ತೀವ್ರ ಸಂಕಷ್ಟದಲ್ಲಿ ಇದ್ದಾರೆ. ಆದ್ದರಿಂದ ಪೂರ್ಣ ಪ್ರಮಾಣದ ಪ್ರದರ್ಶನವನ್ನು ಮತ್ತೆ ಮುಂದುವರೆಸಬೇಕೆಂದು ಒತ್ತಾಯಿಸುವಂತೆ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್, ಕಾರ್ಯದರ್ಶಿ ಕೆ.ಮಂಜು, ರಮೇಶ್ ಯಾದವ್, ರಾಮಮೂರ್ತಿ ಮೂರ್ತಿ ನಿಯೋಗ ಮನವಿ ಸಲ್ಲಿಸಿತು. 

ಈ ವೇಳೆ ಮಾತನಾಡಿದ ಸುಧಾಕರ್‌, ‘ಚಿತ್ರಮಂದಿರಗಳಲ್ಲಿ ಮುಂಗಡ ಟಿಕೆಟ್‌ ಬುಕ್ಕಿಂಗ್ ಪಡೆಯಲಾಗಿರುತ್ತದೆ‌. ಬುಕ್ಕಿಂಗ್ ಹಣ ವಾಪಸು ಕೊಡಲೂ‌ ಆಗುವುದಿಲ್ಲ. ಹೀಗಾಗಿ, ಏ. 7ರವರೆಗೆ ಅವಕಾಶ ಕೊಡಿ ಎಂದು ಈ ಹಿಂದೆ ಚಿತ್ರ ನಿರ್ಮಾಪಕರು ಒತ್ತಾಯಿಸಿದ್ದರು. ಅದಕ್ಕೆ ಮುಖ್ಯಮಂತ್ರಿ ಒಪ್ಪಿದ್ದರು. ಇದೀಗ 7ರ ನಂತರವೂ ಶೇ 100ರಷ್ಟು ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತನಾಡಿ ತಿಳಿಸುತ್ತೇನೆ. ಮದುವೆ, ಛತ್ರ, ಸಭಾಂಗಣ ಸೇರಿ ಅನೇಕ ಕಡೆ ನಿರ್ಬಂಧ ಇದೆ. ತಾಂತ್ರಿಕ‌ ಸಲಹಾ ಸಮಿತಿಯ ಸಲಹೆ ಪಡೆಯುತ್ತೇವೆ. ಬಳಿಕ ಸಿನಿಮಾ ಮಂದಿರಗಳಲ್ಲಿ ಅವಕಾಶ ನೀಡಬೇಕೇ ಎಂಬ ಬಗ್ಗೆ ತೀರ್ಮಾನಿಸುತ್ತೇವೆ’ ಎಂದರು.

ಸಚಿವ ಸುಧಾಕರ್ ಭೇಟಿ ಬಳಿಕ ನಿರ್ಮಾಪಕ ಕೆ.ಮಂಜು ಸುದ್ದಿಗಾರರೊಂದಿಗೆ ಮಾತನಾಡಿ, ಚಿತ್ರಮಂದಿರಗಳು ಯಾವಾಗಲೂ ಭರ್ತಿ ಇರುವುದಿಲ್ಲ. ಮೊದಲ ದಿನ ಪ್ರೇಕ್ಷಕರು ಫುಲ್‌ ಬರಬಹುದು. ನಂತರ ಥಿಯೇಟರ್‌ಗಳಲ್ಲಿ ಶೇ 40ರಿಂದ 50ರಷ್ಟು ಮಾತ್ರ ಇರುತ್ತಾರೆ. ಹೀಗಾಗಿ, ಶೇ 50 ಸೀಟುಗಳಿಗೆ ನಿರ್ಬಂಧ ಮಾಡಬೇಡಿ. ನೀವು ಖುದ್ದಾಗಿ ಸಿನಿಮಾ ಮಂದಿರಗಳಲ್ಲಿ ಬಂದು ನೋಡಿ. ಸಿನಿಮಾ‌ ಮಂದಿರದಲ್ಲಿ ಅಷ್ಟು ಜನರು ಇರುವುದಿಲ್ಲ’ ಎಂದು ಸಚಿವರಲ್ಲಿ ಮನವಿ ಮಾಡಿದರು. ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್, ಪದಾಧಿಕಾರಿಗಳಾದ ರಮೇಶ್ ಯಾದವ್, ರಾಮಮೂರ್ತಿ ಮತ್ತಿತರರು ಇದ್ದರು.

Stay up to date on all the latest ಸಿನಿಮಾ ಸುದ್ದಿ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp