ನಟಿ ಅನು ಪ್ರಭಾಕರ್ ಗೆ ಕೊರೋನಾ ಪಾಸಿಟಿವ್

ಸ್ಯಾಂಡಲ್ ವುಡ್ ನ ಹಲವು ನಟ, ನಟಿಯರಿಗೆ ಕೋವಿಡ್ ಸೋಂಕಿಗೆ ಒಳಗಾಗುತ್ತಿದ್ದು, ಈಗ ನಟಿ ಅನು ಪ್ರಭಾಕರ್ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.

Published: 21st April 2021 04:18 PM  |   Last Updated: 21st April 2021 04:18 PM   |  A+A-


anu-p1

ಅನು ಪ್ರಭಾಕರ್

Posted By : Lingaraj Badiger
Source : Online Desk

ಬೆಂಗಳೂರು: ಸ್ಯಾಂಡಲ್ ವುಡ್ ನ ಹಲವು ನಟ, ನಟಿಯರಿಗೆ ಕೋವಿಡ್ ಸೋಂಕಿಗೆ ಒಳಗಾಗುತ್ತಿದ್ದು, ಈಗ ನಟಿ ಅನು ಪ್ರಭಾಕರ್ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.

ಈ ಕುರಿತು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿರುವ ನಟಿ ಅನು ಪ್ರಭಾಕರ್ ಅವರು, ‘ಎಲ್ಲ ರೀತಿಯ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ, ದುರದೃಷ್ಟವಶಾತ್‌ ನನಗೆ ಕೋವಿಡ್‌–19 ದೃಢಪಟ್ಟಿದೆ. ನನ್ನ ವೈದ್ಯರು ಸೂಚಿಸಿರುವಂತೆ ಎಲ್ಲ ಔಷಧಿಗಳನ್ನು ನಾನು ತೆಗೆದುಕೊಳ್ಳುತ್ತಿದ್ದು, ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.

ಕುಟುಂಬದ ಇತರೆ ಸದಸ್ಯರಿಗೆ ಕೋವಿಡ್‌ ನೆಗೆಟಿವ್‌ ಬಂದಿದೆ. ನನ್ನ ಜೊತೆ ಸಂಪರ್ಕದಲ್ಲಿ ಇದ್ದವರು ತಕ್ಷಣವೇ ಕೋವಿಡ್‌ ಪರೀಕ್ಷೆಗೆ ಮಾಡಿಸಿಕೊಳ್ಳಿ. ಎರಡನೇ ಅಲೆಯನ್ನು ನಿರ್ಲಕ್ಷಿಸಬೇಡಿ. ಮನೆಯಲ್ಲೇ ಇರಿ ಸುರಕ್ಷಿತವಾಗಿರಿ ಎಂದು ಅನು ಪ್ರಭಾಕರ್‌ ಮನವಿ ಮಾಡಿದ್ದಾರೆ.

Stay up to date on all the latest ಸಿನಿಮಾ ಸುದ್ದಿ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp