ಟಾಲಿವುಡ್ ನಾಯಕ ಅಲ್ಲು ಅರ್ಜುನ್ ಗೆ ಕೊರೋನಾ ಸೋಂಕು ದೃಢ

ತೆಲುಗು ಚಿತ್ರರಂಗದ ನಾಯಕ ನಟ ಅಲ್ಲು ಅರ್ಜುನ್‌ಗೆ  ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿರುವುದಾಗಿ ಅವರು ಬುಧವಾರ ತಿಳಿಸಿದ್ದಾರೆ.
ಅಲ್ಲು ಅರ್ಜುನ್
ಅಲ್ಲು ಅರ್ಜುನ್

ತೆಲುಗು ಚಿತ್ರರಂಗದ ನಾಯಕ ನಟ ಅಲ್ಲು ಅರ್ಜುನ್‌ಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿರುವುದಾಗಿ ಅವರು ಬುಧವಾರ ತಿಳಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು 'ನನಗೆ ಕೋವಿಡ್‌ ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಮನೆಯಲ್ಲಿಯೇ ನಾನು ಪ್ರತ್ಯೇಕ ವಾಸದಲ್ಲಿದ್ದೇನೆ ಹಾಗೂ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿದ್ದೇನೆ. ನನ್ನ ಎಲ್ಲ ಹಿತೈಷಿಗಳು ಮತ್ತು ಅಭಿಮಾನಿಗಳು ಚಿಂತಿಸುವ ಅಗತ್ಯವಿಲ್ಲ, ನಾನು ಚೆನ್ನಾಗಿದ್ದೇನೆ' ಎಂದಿದ್ದಾರೆ.

ತಮ್ಮ ಸಂಪರ್ಕಕ್ಕೆ ಬಂದಿದ್ದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಿದ್ದಾರೆ. 'ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ ಹಾಗೂ ನಿಮಗೆ ಅವಕಾಶ ದೊರೆತಾಗ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ..' ಎಂದು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com