'ಅವತಾರ ಪುರುಷ' ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ
ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶರಣ್ ಮತ್ತು ಆಶಿಕಾ ರಂಗನಾಥ್ ನಟನೆಯ ಅವತಾರ ಪುರುಷ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.
Published: 29th April 2021 12:04 PM | Last Updated: 29th April 2021 12:12 PM | A+A A-

ಅವತಾರ ಪುರುಷ ಚಿತ್ರದ ಸ್ಟಿಲ್
ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶರಣ್ ಮತ್ತು ಆಶಿಕಾ ರಂಗನಾಥ್ ನಟನೆಯ ಅವತಾರ ಪುರುಷ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.
ಚಿತ್ರವನ್ನು ಮೇ.28 ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಆದರೆ, ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಚಿತ್ರ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರು ಹೇಳಿದ್ದಾರೆ.
ಚಿತ್ರ ಬಿಡುಗಡೆಗೆ ಸಾಕಷ್ಟು ಸಿದ್ಧತೆಗಳನ್ನು ನಡೆಸಲಾಗಿತ್ತು. ಆದರೆ, ಕೊರೋನಾ ಎರಡನೇ ಅಲೆಯು ಎಲ್ಲಾ ಕಾರ್ಯಗಳನ್ನು ಸ್ಥಗಿತಗೊಳ್ಳುವಂತೆ ಮಾಡಿದೆ. ಪ್ರಸ್ತುತದ ಪರಿಸ್ಥಿತಿಯಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಶರಣ್-ಸುನಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ 'ಅವತಾರ ಪುರುಷ' ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಪ್ರಮುಖ ಪಾತ್ರಗಳಲ್ಲಿ ಸಾಯಿ ಕುಮಾರ್, ಸುಧಾರಾಣಿ, ಶ್ರೀನಗರ ಕಿಟ್ಟಿ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ವಿಕ್ರಮ್ ಮೊರ್ ಅವರು ಚಿತ್ರಕ್ಕೆ ನೃತ್ಯ ಸಂಯೋಜನೆ ಮಾಡಿದ್ದಾರೆ. ವಿಲಿಯಮ್ ಡೇವಿಡ್ ಛಾಯಾಗ್ರಹಣದಲ್ಲಿ ಚಿತ್ರ ಮೂಡಿ ಬಂದಿದೆ.
ಇನ್ನು ಶರಣ್ ಅವರು ಗುರು ಶಿಷ್ಯರು ಚಿತ್ರದ ಎರಡನೇ ಹಂತದ ಚಿತ್ರೀಕರಣವನ್ನು ಪೂರ್ಣಗೊಳಿಸುವಲ್ಲಿ ಕಾರ್ಯಮಗ್ನರಾಗಿದ್ದು, ಆಶಿಕಾ ರಂಗನಾಥ್ ಅವರು ಮದಗಜ ಚಿತ್ರದ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ.