ಸಿನಿಮಾ ಆಗಲಿದೆ ಉದ್ಯಮಿ ವಿಜಯ ಸಂಕೇಶ್ವರ ಜೀವನ ಚರಿತ್ರೆ: ರಿಷಿಕಾ ಶರ್ಮಾ ನಿರ್ದೇಶನದ ಚಿತ್ರಕ್ಕೆ ಟೈಟಲ್ ಫಿಕ್ಸ್!
ಟ್ರಂಕ್ ಸಿನಿಮಾ ನಿರ್ದೇಶಕಿ ರಿಷಿಕಾ ಶರ್ಮಾ ಜೀವನ ಚರಿತ್ರೆ ಆಧರಿತ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಪದ್ಮಶ್ರೀ ಪುರಸ್ಕೃತ ಡಾ.ವಿಜಯ ಸಂಕೇಶ್ವರ ಅವರ ಜೀವನ ಚರಿತ್ರೆ ಆಧರಿತ ಸಿನಿಮಾಗೆ ವಿಜಯಾನಂದ ಎಂಬ ಟೈಟಲ್ ಇಡಲಾಗಿದೆ.
Published: 03rd August 2021 11:21 AM | Last Updated: 03rd August 2021 11:21 AM | A+A A-

ರಿಷಿಕಾ ಶರ್ಮಾ
ಟ್ರಂಕ್ ಸಿನಿಮಾ ನಿರ್ದೇಶಕಿ ರಿಷಿಕಾ ಶರ್ಮಾ ಜೀವನ ಚರಿತ್ರೆ ಆಧರಿತ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಪದ್ಮಶ್ರೀ ಪುರಸ್ಕೃತ ಡಾ.ವಿಜಯ ಸಂಕೇಶ್ವರ ಅವರ ಜೀವನ ಚರಿತ್ರೆ ಆಧರಿತ ಸಿನಿಮಾಗೆ ವಿಜಯಾನಂದ ಎಂಬ ಟೈಟಲ್ ಇಡಲಾಗಿದೆ.
ಟ್ರಂಕ್ ಸಿನಿಮಾ ಹೀರೋ ನಿಹಾಲ್ ಈ ಪಾತ್ರದಲ್ಲಿ ನಟಿಸಲಿದ್ದಾರೆ. ಆಗಸ್ಟ್ 2ರಂದು ಡಾ.ವಿಜಯ ಸಂಕೇಶ್ವರ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಚಿತ್ರತಂಡ, “ವಿಜಯಾನಂದ” ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.
ಸಾರಿಗೆ ಕ್ಷೇತ್ರ, ಪತ್ರಿಕೋದ್ಯಮ, ಮಾಧ್ಯಮ ಹಾಗು ಹಲವು ವಿಭಾಗಗಳಲ್ಲಿ ಖ್ಯಾತಿ ಪಡೆದಿರುವ ಪ್ರತಿಷ್ಠಿತ ವಿ.ಆರ್.ಎಲ್ ಸಮೂಹ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಹಾಗು ಪ್ರೊಮೋಟರ್ ಡಾ. ವಿಜಯ ಸಂಕೇಶ್ವರ ಅವರ ಪುತ್ರ ಆನಂದ ಸಂಕೇಶ್ವರ ಅವರು ಇದೀಗ ವಿ.ಆರ್.ಎಲ್. ಮೀಡಿಯಾ ಸಂಸ್ಥೆ ಅಡಿಯಲ್ಲಿ “ವಿಆರ್ ಎಲ್” ಫಿಲಂ ಪ್ರೊಡಕ್ಷನ್ಸ್” ಹೆಸರಿನ ಸ್ವಂತ ನಿರ್ಮಾಣ ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ. ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಕನ್ನಡ ಸಿನಿಮಾ ಪದ್ಮಶ್ರೀ ಡಾ.ವಿಜಯ ಸಂಕೇಶ್ವರರ ಜೀವನಾಧಾರಿತ ಚಿತ್ರವಾಗುತ್ತಿದೆ.
ನಟ ನಿಹಾಲ್ ಎರಡು ವರ್ಷಗಳ ಹಿಂದೆಯೇ ಈ ಸಿನಿಮಾ ಮಾಡುವ ಐಡಿಯಾ ನೀಡಿದ್ದರು. ಸಂಕೇಶ್ವರ ಅವರ ಜೀವನ ಚರಿತ್ರೆಯನನ್ನು ತೆರೆಯ ಮೇಲೆ ತೋರಿಸಲು ನಾನು ಸಾಕಷ್ಟು ಸಂಶೋಧನೆ ಮಾಡಿದೆ. ಅದಾದ ನಂತರ ನಾನು ವಿಜಯ ಸಂಕೇಶ್ವರ ಅವರನ್ನು ಭೇಟಿ ಮಾಡಲು ಸಾಧ್ಯವಾಯಿತು. ನಂತರ ಅವರ ಪುತ್ರನ ಜೊತೆಯೂ ಹಲವು ಸುತ್ತಿನ ಮಾತುಕತೆ ನಡೆಯಿತು. ಸಿನಿಮಾಗೆ ಆನಂದ್ ಸಂಕೇಶ್ವರ್ ಗ್ರೀನ್ ಸಿಗ್ನಲ್ ನೀಡಿದರು ಎಂದು ರಿಷಿಕಾ ತಿಳಿಸಿದ್ದಾರೆ.
ಈ ಯೋಜನೆಯು ವಿಆರ್‌ಎಲ್ ಪ್ರೊಡಕ್ಷನ್ಸ್‌ನಿಂದ ಚೊಚ್ಚಲ ನಿರ್ಮಾಣವಾಗಿದೆ, ಮತ್ತು ಇದು ದಕ್ಷಿಣ ಭಾರತದ ನಾಲ್ಕು ಭಾಷೆಗಳಾದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗಲಿದೆ. "ವಿಜಯ ಸಂಕೇಶ್ವರ್ ಅವರ ಜೀವನ ಪ್ರಯಾಣವು ತುಂಬಾ ಸ್ಫೂರ್ತಿದಾಯಕವಾಗಿದೆ" ಎಂದು ರಿಷಿಕಾ ವಿವರಿಸಿದ್ದಾರೆ.
ಜೀವನ ಚರಿತ್ರೆಯ ಪ್ರಮುಖ ಅಂಶವನ್ನು ದುರ್ಬಲಗೊಳಿಸದೆ ಕಮರ್ಷಿಯಲ್ ಅಂಶಗಳೊಂದಿಗೆ ಮಾಡಲಾಗುವುದು. ನಾನು ಚಲನಚಿತ್ರ ನಿರ್ಮಾಣಕ್ಕಾಗಿ ನನ್ನ ಗುರುಗಳಾದ ಮಣಿರತ್ನಂ ಅವರಿಂದ ಸೂಚನೆಯನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ,.
ಚಿತ್ರತಂಡ ಎರಡು ವರ್ಷಗಳಿಂದ ಸತತವಾಗಿ ಈ ಚಿತ್ರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ತೆಲುಗು ಮತ್ತು ಮಲಯಾಳಂ ಚಿತ್ರ ರಂಗದ ಖ್ಯಾತ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್ “ವಿಜಯಾನಂದ” ಚಿತ್ರಕ್ಕೆ ಹಿನ್ನಲೆ ಸಂಗೀತ ಮತ್ತು ಸಂಗೀತ ನಿರ್ದೇಶಕರಾಗಿ ಕೈ ಜೋಡಿಸಿದ್ದಾರೆ. ಈ ಚಿತ್ರ ತಂಡಕ್ಕೆ ಬಹಳಷ್ಟು ದೊಡ್ಡ ನಟ, ನಟಿಯರು ಹಾಗೂ ತಂತ್ರಜ್ಞರು ಕಾಣಿಸಿಕೊಳ್ಳಲಿದ್ದಾರೆ. ಅವರ ಆಯ್ಕೆ ಇಷ್ಟರಲ್ಲೇ ನಡೆಯಲಿದ್ದು, ಶೀಘ್ರವೇ ಶೂಟಿಂಗ್ ಕುರಿತಂತೆ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ.
ನಟ ನಿಹಾಲ್ ಜೀವನಚರಿತ್ರೆಯಲ್ಲಿ ವಿಜಯ ಸಂಕೇಶ್ವರ ಪಾತ್ರದಲ್ಲಿ ನಟಿಸುತ್ತಿರುವುದಕ್ಕೆ ಸಂತೋಷವಾಗಿದೆ ಎಂದು ಹೇಳಿದ್ದಾರೆ ಉತ್ತರ ಕರ್ನಾಟಕದಿಂದ ಬಂದಿರುವ ನಾನು ಸಂಕೇಶ್ವರ ಅವರ ದೊಡ್ಡ ಅಭಿಮಾನಿ,ರು ಸೆಪ್ಟೆಂಬರ್ ನಿಂದ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಸಜ್ಜಾಗಿದೆ.