
ಅಭಿಷೇಕ್ - ಸುಮಲತಾ - ದರ್ಶನ್
ಬೆಂಗಳೂರು: ಇತ್ತೀಚಿನ ಕೆಲ ವಿವಾದಗಳಿಂದ ತೀವ್ರ ಅಸಮಾಧಾನಿತರಾಗಿದ್ದ ನಟ ದರ್ಶನ್ ಅವರು ನೆಮ್ಮದಿಗಾಗಿ ದೇವರ ಮೊರೆ ಹೋಗಿದ್ದಾರೆ.
ಸೋಮವಾರ ಬೆಳಗ್ಗೆ ತಿರುಪತಿಯಲ್ಲಿ ತಿಮ್ಮಪ್ಪನ ದರ್ಶನ ಪಡೆದಿರುವ ಫೋಟೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿವೆ. ನಟ ದರ್ಶನ್ ಮತ್ತು ಅಭಿಷೇಕ್ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೋ ಗಮನ ಸೆಳೆದಿದೆ.
ಕಳೆದ ತಿಂಗಳಷ್ಟೇ ಕೇರಳದಲ್ಲಿ ಶನಿದೇವರ ದರ್ಶನ ಪಡೆದಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಈಗ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ಆಶೀರ್ವಾದ ಪಡೆದುಕೊಂಡಿದ್ದಾರೆ.
ಮಂಡ್ಯ ಸಂಸದೆ ಸುಮಲತಾ, ಅಭಿಷೇಕ್ ಅಂಬರೀಶ್ ಹಾಗೂ ದರ್ಶನ್ ಅವರು ತಿರುಪತಿಗೆ ಭೇಟಿ ಕೊಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತಿರುಪತಿಗೆ ಹೋಗುತ್ತಿರುವುದಾಗಿ ಸ್ವತಃ ಸುಮಲತಾ ಅವರೇ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು. ಈ ವೇಳೆ ನಟ ದರ್ಶನ್, ಅಭಿಷೇಕ್ ಜೊತೆ ಸುಮಲತಾ ಇರುವ ಫೋಟೋ ಹಂಚಿಕೊಂಡಿದ್ದಾರೆ.
‘ರಾಬರ್ಟ್' ಚಿತ್ರದ ಬಿಡುಗಡೆಗೆ ಮುಂಚೆ ನಟ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರು ತಿರುಪತಿಗೆ ಭೇಟಿ ನೀಡಿದ್ದರು. ಮಾರ್ಚ್ 11 ರಂದು ರಾಬರ್ಟ್ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಬೇಕಿತ್ತು. ಅದಕ್ಕೂ ಮುಂಚೆ ಫೆಬ್ರವರಿ ತಿಂಗಳಲ್ಲಿ ಚಾಲೆಂಜಿಂಗ್ ಸ್ಟಾರ್ ತಿರುಪತಿಗೆ ಭೇಟಿ ನೀಡಿದ್ದರು. ಈ ವೇಳೆ ಉಮಾಪತಿಯೂ ಜೊತೆಯಲ್ಲಿದ್ದರು.