ಬಹುನಿರೀಕ್ಷಿತ ಕೆಜಿಎಫ್ 2 ಚಿತ್ರದ ಬಿಡುಗಡೆ ದಿನಾಂಕ ರಿವೀಲ್ ಮಾಡಿದ ರಾಕಿ ಭಾಯ್!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರದ ಬಿಡುಗಡೆಗಾಗಿ ಭಾರತೀಯ ಚಿತ್ರರಂಗವೇ ಎದುರು ನೋಡುತ್ತಿದೆ. ಈ ಮಧ್ಯೆ ಚಿತ್ರದ ಬಿಡುಗಡೆ ದಿನಾಂಕವನ್ನು ರಾಕಿ ಬಾಯ್ ಯಶ್ ರಿವೀಲ್ ಮಾಡಿದ್ದಾರೆ. 
ಯಶ್
ಯಶ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರದ ಬಿಡುಗಡೆಗಾಗಿ ಭಾರತೀಯ ಚಿತ್ರರಂಗವೇ ಎದುರು ನೋಡುತ್ತಿದೆ. ಈ ಮಧ್ಯೆ ಚಿತ್ರದ ಬಿಡುಗಡೆ ದಿನಾಂಕವನ್ನು ರಾಕಿ ಬಾಯ್ ಯಶ್ ರಿವೀಲ್ ಮಾಡಿದ್ದಾರೆ. 

2022ರ ಏಪ್ರಿಲ್ 14ರಂದು ಚಿತ್ರ ಜಗತ್ತಿನಾದ್ಯಂತ ತೆರೆಗೆ ಅಪ್ಪಳಿಸಲಿದೆ. ಇನ್ನು ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ.

2018ರ ಡಿಸೆಂಬರ್ 21ರಂದು ಬಿಡುಗಡೆಯಾಗಿದ್ದ ಕೆಜಿಎಫ್ ಚಾಪ್ಟರ್ 1 ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿತ್ತು. ಕನ್ನಡ ಚಿತ್ರವನ್ನು 250 ಕೋಟಿ ಕ್ಲಬ್ ಸೇರಿದ ಮೊದಲ ಚಿತ್ರವಾಗಿದ್ದು ಸಾರ್ವಕಾಲಿಕ ದಾಖಲೆ ಬರೆದಿತ್ತು. 

ಹೀಗಾಗಿ ಕೆಜಿಎಫ್ 2 ಚಿತ್ರದ ಮೇಲೆ ಅಭಿಮಾನಿಗಳಲ್ಲಿ ನಿರೀಕ್ಷೆಗಳು ಹೆಚ್ಚಾಗಿವೆ. ಕೆಜಿಎಫ್ 2 ಚಿತ್ರ ಕಳೆದ ವರ್ಷವೇ ಬಿಡುಗಡೆಯಾಗಬೇಕಿತ್ತು. ಆದರೆ ಮಹಾಮಾರಿ ಕೊರೋನಾ ಹಿನ್ನಲೆಯಲ್ಲಿ ಲಾಕ್ ಡೌನ್ ಹಾಗೂ ಸಂಪೂರ್ಣವಾಗಿ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ಇಲ್ಲದ ಕಾರಣ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗಿತ್ತು. 

ಆದರೆ ಚಿತ್ರತಂಡ 2021ರ ಜುಲೈನಲ್ಲಿ ಚಿತ್ರಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. ಆದರೆ ಕೊರೋನಾ ಎರಡನೇ ಅಲೆ ಹಿನ್ನಲೆಯಲ್ಲಿ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದ ಬಹುಕೋಟಿ ಬಜೆಟ್ ನ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com