ನಾವು ಇಬ್ಬರಲ್ಲ, ಮೂವರು; ತಾಯಿಯಾಗುತ್ತಿರುವ ಸಂತಸ ಹಂಚಿಕೊಂಡ ನಟಿ ಅಮೂಲ್ಯ

ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ವಿಚಾರವನ್ನು ಸ್ವತಃ  ಅವರೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಅಮೂಲ್ಯ ಜಗದೀಶ್
ಅಮೂಲ್ಯ ಜಗದೀಶ್

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಜಗದೀಶ್ ಅವರು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ವಿಚಾರವನ್ನು ಸ್ವತಃ  ಅವರೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪತಿ ಜಗದೀಶ್ ಜೊತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು ‘ಸದ್ಯ ನಾವು ಈಗ ಇಬ್ಬರಲ್ಲ. 2022ರಲ್ಲಿ ಮೂವರಾಗುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ಅಮೂಲ್ಯ ಈ ರೀತಿ ಬರೆದುಕೊಳ್ಳುತ್ತಿದ್ದಂತೆಯೇ ಅಭಿಮಾನಿಗಳು ವಿಶ್ ಮಾಡಲು ಆರಂಭಿಸಿದ್ದಾರೆ. ಬಾಲನಟಿಯಾಗಿಯೇ ಚಿತ್ರರಂಗಕ್ಕೆ ಕಾಲಿಟ್ಟ ಅಮೂಲ್ಯ ಅವರು ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಹೀರೋಯಿನ್ ಆಗಿ ಚಿರಪರಿಚಿತರಾದರು.

ಚಿಕ್ಕ ವಯಸ್ಸಿನಲ್ಲಿಯೇ ಸ್ಟಾರ್ ನಟರೊಂದಿಗೆ ಅಭಿನಯಿಸಿದ ಕೀರ್ತಿ ಇವರದ್ದಾಗಿದೆ. ಇತ್ತ ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ 2017ರಲ್ಲಿ ರಾಜಕೀಯ ಹಿನ್ನೆಲೆ ಇರುವ ಕುಟುಂಬದ ಜಗದೀಶ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com