ಪದವಿ ಪೂರ್ವ ಸಿನಿಮಾಗೆ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಲೇಟೆಸ್ಟ್ ಸೇರ್ಪಡೆ

ಯೋಗರಾಜ್ ಭಟ್ ಬ್ಯಾನರ್ ಅಡಿ ಮೂಡಿಬರುತ್ತಿರುವ 'ಪದವಿ ಪೂರ್ವ' ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ದಿವ್ಯಾ ಉರುಡುಗ ಅವರು ಸಂತಸ ವ್ಯಕ್ತಪಡಿಸಿದ್ದಾರೆ. 
ದಿವ್ಯಾ ಉರುಡುಗ
ದಿವ್ಯಾ ಉರುಡುಗ

ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ಟೀನೇಜ್ ರೊಮ್ಯಾಂಟಿಕ್ ಸಿನಿಮಾ 'ಪದವಿಪೂರ್ವ'ದಲ್ಲಿ ದಿವ್ಯಾ ಉರುಡುಗ ಅವರು ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪೃಥ್ವಿ ಶಾಮನೂರು, ಅಂಜಲಿ ಅನೀಶ್, ಯಶ ಶಿವಕುಮಾರ್ ಮುಂತಾದ ಹೊಸಬರೇ ನಟಿಸುತ್ತಿರುವ ಈ ಸಿನಿಮಾದಲ್ಲಿ ಪಂಚತಂತ್ರ ಖ್ಯಾತಿಯ ಸೊನಾಲ್ ಮೊಂತೆರೊ ಕೂಡ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವುದು ವಿಶೇಷ.

ಯೋಗರಾಜ್ ಭಟ್ ಬ್ಯಾನರ್ ಅಡಿ ಮೂಡಿಬರುತ್ತಿರುವ ಪದವಿಪೂರ್ವ ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ದಿವ್ಯಾ ಉರುಡುಗ ಅವರು ಸಂತಸ ವ್ಯಕ್ತಪಡಿಸಿದ್ದಾರೆ. 

90ರ ದಶಕದ ಕಥೆಯನ್ನು ಹೊಂದಿರುವ ಈ ಸಿನಿಮಾ ಮಂಗಳುರು  ಮತ್ತು ಬೆಂಗಳೂರು ಸುತ್ತಮುತ್ತ ಚಿತ್ರೀಕರಣಗೊಳ್ಳಲಿದೆ. ಸಂತೋಷ್ ರೈ ಪಾತಾಜೆ ಅವರು ಸಿನಿಮೆಟೊಗ್ರಫಿ ಹೊಣೆ ಹೊತ್ತಿದ್ದರೆ, ಅರ್ಜುನ್ ಜನ್ಯ ಅವರು ಸಂಗೀತ ನೀಡುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com