ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟ ಶಿವರಾಂ ಅಂತಿಮ ದರ್ಶನ: ಮಧ್ಯಾಹ್ನ ಅಂತ್ಯಕ್ರಿಯೆ

ನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84 ವ) ಅವರ ಪಾರ್ಥಿವ ಶರೀರವನ್ನು ಚಿತ್ರರಂಗದವರು ಮತ್ತು ಸಾರ್ವಜನಿಕ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಭಾನುವಾರ ಬೆಳಗ್ಗೆ 10.30ರವರೆಗೆ ಇಡಲಾಗಿದೆ.
ಹಿರಿಯ ನಟ ಶಿವರಾಂ ಅವರ ಅಂತಿಮ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್
ಹಿರಿಯ ನಟ ಶಿವರಾಂ ಅವರ ಅಂತಿಮ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84 ವ) ಅವರ ಪಾರ್ಥಿವ ಶರೀರವನ್ನು ಚಿತ್ರರಂಗದವರು ಮತ್ತು ಸಾರ್ವಜನಿಕ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಭಾನುವಾರ ಬೆಳಗ್ಗೆ 10.30ರವರೆಗೆ ಇಡಲಾಗಿದೆ. 

ಶಿವರಾಂ(Sandalwood senior actor Shivaram) ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 10.30ರವರೆಗೆ ಕಲಾಕ್ಷೇತ್ರದಲ್ಲಿ ಇಟ್ಟು ನಂತರ ತ್ಯಾಗರಾಜನಾಗರದಲ್ಲಿರುವ ಅವರ ನಿವಾಸಕ್ಕೆ ವರ್ಗಾಯಿಸಲಾಗುತ್ತದೆ. ಅಲ್ಲಿ ಪೂಜಾ ವಿಧಿವಿಧಾನವನ್ನು ನೆರವೇರಿಸಿ ಬಳಿಕ ಕುಟುಂಬಸ್ಥರು, ಸಮೀಪದ ಬಂಧುಗಳ ಸಮ್ಮುಖದಲ್ಲಿ ಬನಶಂಕರಿಯ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಕೆಲ ದಿನಗಳ ಹಿಂದೆ ಮನೆಯಲ್ಲಿ ಪೂಜೆಗೆ ಕುಳಿತುಕೊಳ್ಳಲು ಸಿದ್ಧರಾಗುತ್ತಿದ್ದ ವೇಳೆ ನಟ ಶಿವರಾಂ ಎಡವಿ ಬಿದ್ದು ತಲೆಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೋಮಾ ಸ್ಥಿತಿಗೆ ಜಾರಿದ ನಂತರ ಚೇತರಿಕೆ ಕಾಣಲೇ ಇಲ್ಲ. ಅದಕ್ಕೂ ಕೆಲ ದಿನಗಳ ಹಿಂದೆ ಅವರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪಘಾತವಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com