ಅಲ್ಲು ಅರ್ಜುನ್
ಸಿನಿಮಾ ಸುದ್ದಿ
ಎರಡೇ ದಿನಕ್ಕೆ ಬಾಕ್ಸ್ ಆಫೀಸ್ನಲ್ಲಿ 100 ಕೋಟಿ ರೂ. ಗೂ ಹೆಚ್ಚು ಗಳಿಸಿದ ‘ಪುಷ್ಪ’
ನಟ ಅಲ್ಲು ಅರ್ಜುನ್ ನಟನೆಯ ಸಿನಿಮಾ ‘ಪುಷ್ಪ’ ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದ್ದು, ಎರಡೇ ದಿನಕ್ಕೆ 100 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ.
ಬೆಂಗಳೂರು: ನಟ ಅಲ್ಲು ಅರ್ಜುನ್ ನಟನೆಯ ಸಿನಿಮಾ ‘ಪುಷ್ಪ’ ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದ್ದು, ಎರಡೇ ದಿನಕ್ಕೆ 100 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ.
ಡಿಸೆಂಬರ್ 17ರಂದು ‘ಪುಷ್ಪ’ಸಿನಿಮಾ ತೆರೆಗೆ ಬಂದಿದ್ದು, ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿತ್ತು. ಸುಕುಮಾರ್ ನಿರ್ದೇಶನದ ಈ ಚಿತ್ರ ಕ್ರಿಸ್ಮಸ್ಗೂ ಮೊದಲು ಕನಿಷ್ಠ ಒಂದು ವಾರದವರೆಗೆ ಓಡುವ ನಿರೀಕ್ಷೆಯಿದೆ.
ಇದು ಪ್ಯಾನ್- ಇಂಡಿಯಾ ಸಿನಿಮಾವಾಗಿದ್ದು, ಡಿಸೆಂಬರ್ 17 ರಂದು ಐದು ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಪುಷ್ಪ ಭಾರತ ಮಾತ್ರವಲ್ಲದೆ, ವಿದೇಶದಲ್ಲೂ ಏಕಕಾಲಕ್ಕೆ ರಿಲೀಸ್ ಆಗಿದೆ.
ಪುಷ್ಪ ಸಿನಿಮಾ ಎರಡೇ ದಿನಕ್ಕೆ 100 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ. ಅಮೆರಿಕಾದಲ್ಲಿ ಹೆಚ್ಚು ಕಮ್ಮಿ 9 ಕೋಟಿ ರೂ. ಗಳಿಸಿದೆ ಎಂದು ರಮೇಶ್ ಬಾಲಾ ಅವರು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ