ನಾಗಶೇಖರ್ ಗೆ ಮಹಿಳೆಯಿಂದ ದೋಖಾ: ಪೊಲೀಸ್ ಠಾಣೆ ಮೆಟ್ಟಿಲೇರಿದ ಖ್ಯಾತ ನಿರ್ದೇಶಕ
ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ನಾಗಶೇಖರ್ ತಮಗೆ ವಂಚನೆಯಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 50 ಲಕ್ಷ ರೂಪಾಯಿ ವಂಚಿಸಲಾಗಿದೆ ಎಂದು ಬೆಂಗಳೂರಿನ ಆರ್.ಆರ್ ನಗರ ಪೊಲೀಸ್ ಠಾಣೆಗೆ ನಿರ್ದೇಶಕ ದೂರು ನೀಡಿದ್ದಾರೆ.
Published: 25th December 2021 12:58 PM | Last Updated: 25th December 2021 01:11 PM | A+A A-

ನಾಗಶೇಖರ್
ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ನಾಗಶೇಖರ್ ತಮಗೆ ವಂಚನೆಯಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 50 ಲಕ್ಷ ರೂಪಾಯಿ ವಂಚಿಸಲಾಗಿದೆ ಎಂದು ಬೆಂಗಳೂರಿನ ಆರ್.ಆರ್ ನಗರ ಪೊಲೀಸ್ ಠಾಣೆಗೆ ನಿರ್ದೇಶಕ ದೂರು ನೀಡಿದ್ದಾರೆ.
ಆರ್.ಆರ್ ನಗರದ ಮೀನಾ ಹಾಗೂ ರಾಜ್ಕುಮಾರ್ ವಿರುದ್ಧ ದೂರು ನೀಡಲಾಗಿದೆ. ಮನೆ ಖರೀದಿಗೆ ಮಾತನಾಡಿ, ನಾಗಶೇಖರ್ ಹಣ ನೀಡಿದ್ದರು. ಇದೀಗ ಮನೆಯನ್ನು ಬೇರೆಯವರಿಗೆ ಮಾರಾಟ ಮಾಡಲಾಗಿದೆ. ಇತ್ತ ಹಣವೂ ಇಲ್ಲ, ಮನೆಯೂ ಇಲ್ಲ; ತಮಗೆ ವಂಚನೆಯಾಗಿದೆ ಎಂದು ನಾಗಶೇಖರ್ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: 'ವಿಚ್ಛೇದನ, ಸಿಂಗಲ್ ಪೇರೆಂಟ್ ಸುತ್ತ ಶ್ರೀಕೃಷ್ಣ@ಜಿಮೇಲ್.ಕಾಮ್: ಸಂಬಂಧಗಳಿಗೆ ನಿರ್ದೇಶಕ ನಾಗಶೇಖರ್ ಹೊಸ ಆಯಾಮ'
ಆರ್.ಆರ್.ನಗರದ ಜಯಣ್ಣ ಲೇಔಟ್‌ನಲ್ಲಿ ಮನೆ ಖರೀದಿ ಮಾಡಲು ಮುಂದಾಗಿದ್ದ ನಿರ್ದೇಶಕ ನಾಗಶೇಖರ್, ಅದಕ್ಕಾಗಿ 2 ಕೋಟಿ 70 ಲಕ್ಷ ರೂ.ಗೆ ಮೀನಾ ಎಂಬುವವರ ಬಳಿ ಮಾತುಕತೆ ನಡೆಸಿದ್ದರು. 2020ರ ಆಗಸ್ಟ್‌ನಲ್ಲಿ ಸೇಲ್ ಅಗ್ರಿಮೆಂಟ್ ಮಾಡಿಕೊಳ್ಳಲಾಗಿತ್ತು. ಅಗ್ರಿಮೆಂಟ್ ಬಳಿಕ ಹಂತ ಹಂತವಾಗಿ ಮೀನಾ ಅವರ ಖಾತೆಗೆ ಹಣ ವರ್ಗಾವಣೆ ಮಾಡಿದ್ದ ನಾಗಶೇಖರ್, ಒಟ್ಟು 50 ಲಕ್ಷ ರು. ನೀಡಿದ್ದರು.
ಆದರೆ ಈಗ ಮತ್ತೊಬ್ಬರಿಗೆ ಮನೆ ಮಾರಾಟ ಮಾಡಲಾಗಿದೆ ಎಂದು ನಿರ್ದೇಶಕ ನಾಗಶೇಖರ್ ದೂರು ನೀಡಿದ್ದಾರೆ. ಅಲ್ಲದೇ ಸೇಲ್ ಅಗ್ರಿಮೆಂಟ್ ಬಳಿಕ ಪಡೆದಿದ್ದ 50 ಲಕ್ಷ ರೂ ಹಣವನ್ನು ವಾಪಸ್ ನೀಡಿಲ್ಲ ಎಂದು ನಿರ್ದೇಶಕ ಆರೋಪಿಸಿದ್ದಾರೆ.