'ಈ ಕನಸು ನಿಜವಾಗಿದೆ': ನಿಶ್ಚಿತಾರ್ಥ ಖಚಿತಪಡಿಸಿದ ನಟಿ ಅದಿತಿ ಪ್ರಭುದೇವ

ಕನ್ನಡ ಚಿತ್ರರಂಗದ ಖ್ಯಾತ ನಾಯಕ ನಟಿ ಅದಿತಿ ಪ್ರಭುದೇವ ಅವರು ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ನಟಿ ಅದಿತಿ ಪ್ರಭುದೇವ
ನಟಿ ಅದಿತಿ ಪ್ರಭುದೇವ
Updated on

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಾಯಕ ನಟಿ ಅದಿತಿ ಪ್ರಭುದೇವ ಅವರು ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಹೌದು.. ನಟಿ ಅದಿತಿ ಪ್ರಭುದೇವ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ಖಚಿತಪಡಿಸಿದ್ದು, ಇನ್‌ಸ್ಟಾಗ್ರಾಂನಲ್ಲಿ ನಿಶ್ಚಿತಾರ್ಥದ ವಿಷಯವನ್ನು ಖಚಿತಪಡಿಸಿದ್ದಾರೆ. 

ಇನ್‌ಸ್ಟಾಗ್ರಾಂನಲ್ಲಿ ದಾವಣಗೆರೆ ಮೂಲದ ಹುಡುಗನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ  ಫೋಟೊವನ್ನು ಹಂಚಿಕೊಂಡಿದ್ದಾರೆ. ಅದರ ಜತೆಯಲ್ಲಿ ‘ಒಂದು ಕನಸಿನಂತೆ ಈ ಕನಸು ನಿಜವಾಗಿದೆ’ ಎಂದು ಬರೆದಿದ್ದಾರೆ. ಹಾಗೆ ಹ್ಯಾಶ್‌ಟ್ಯಾಗ್‌ ಹಾಕಿ ಎಂಗೆಜ್ಡ್‌ ಎಂದು ಬರೆದುಕೊಂಡಿದ್ದಾರೆ. ಭಾನುವಾರ (ಡಿಸೆಂಬರ್​ 26) ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಹುಡುಗ ದಾವಣಗೆರೆ ಮೂಲದವರು ಎನ್ನಲಾಗಿದೆ. 

ಅಭಿಮಾನಿಗಳು ಸೇರಿದಂತೆ ಸಿನಿಮಾ, ಕಿರುತೆರೆಯ ಗಣ್ಯರು, ಆಪ್ತರು, ಗೆಳೆಯರು ಶುಭಾಶಯಗಳನ್ನು ಹೇಳುತ್ತಿದ್ದಾರೆ. 

ಸೋಮವಾರ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇದೀಗ ಸ್ವತಃ ನಟಿಯೇ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com