ಪ್ರಧಾನಿ ಮೋದಿ ಮನ್ ಕೀ ಬಾತ್‌ಗೆ ಮಿಡಿದ ದೀಪಿಕಾ, ಕರೀನಾ ಕಪೂರ್; ಟ್ವೀಟ್ ವೈರಲ್!

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್‌ಗೆ ಬಾಲಿವುಡ್ ನಟಿಯರಾದ ಕರೀನಾ ಕಪೂರ್ ಮತ್ತು ದಿಪೀಕಾ ಪಡುಕೋಣೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

Published: 01st February 2021 04:14 PM  |   Last Updated: 01st February 2021 04:18 PM   |  A+A-


Modi-Kareena-Depeeka

ಮೋದಿ-ಕರೀನಾ-ದೀಪಿಕಾ

Posted By : Vishwanath S
Source : Online Desk

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್‌ಗೆ ಬಾಲಿವುಡ್ ನಟಿಯರಾದ ಕರೀನಾ ಕಪೂರ್ ಮತ್ತು ದಿಪೀಕಾ ಪಡುಕೋಣೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. 

ಭಾನುವಾರದ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಅವರು ದೇಶದ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಹೇಳಿದ್ದರು. ಈ ಬಗ್ಗೆ ದೀಪಿಕಾ ಪಡುಕೋಣೆ ಮತ್ತು ಕರೀನಾ ಕಪೂರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ನಾಲ್ವರು ಮಹಿಳಾ ಪೈಲಟ್ ಗಳು, ಸ್ಯಾನ್ ಫ್ರಾನ್ಸಿಸ್ಕೋ ಬೆಂಗಳೂರು ನಡುವಣ ವಿಶ್ವದ ಅತೀ ದೀರ್ಘ ವಾಯು ಮಾರ್ಗದ ವಿಮಾನಯಾನವನ್ನು ಸಂಪೂರ್ಣವಾಗಿ ಕ್ರಮಿಸಿ ಇತಿಹಾಸ ನಿರ್ಮಿಸಿದ್ದರು. ಈ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದರು. 

ಅಲ್ಲದೆ ಮೋದಿ ಅವರು ಮಹಿಳೆಯರ ಸಾಧನೆಗಳ ಬಿಂಬಿಸುವ ಚಿತ್ರಗಳನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದರು. ಅಲ್ಲದೆ ಭಾರತ ನಮ್ಮ ನಾರೀಯರ ಶಕ್ತಿಗೆ ನಮಿಸುತ್ತದೆ ಎಂದು ಟ್ವೀಟಿಸಿದ್ದರು. ಈ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ದೀಪಿಕಾ, ನೀವು ಜಗತ್ತಿನಲ್ಲಿ ಕಾಣಬಯಸುವ ಬದಲಾವಣೆಯನ್ನು ನಿಮ್ಮಲ್ಲಿ ತಂದುಕೊಳ್ಳಿ ಎಂಬ ಮಹಾತ್ಮಾ ಗಾಂಧಿಯವರ ಮಾತುನ್ನು ಉಲ್ಲೇಘಿಸಿದ್ದಾರೆ.

ಇದೇ ವೇಳೆ, ಬಾಲಿವುಡ್ ನಟಿ ಕರೀನಾ ಕಪೂರ್ ಇನ್ ಸ್ಟಾಗ್ರಾಂನಲ್ಲಿ ತಡೆರಹಿತ ವಾಣಿಜ್ಯ ವಿಮಾನಗಳನ್ನು ಹಾರಿಸುವುದರಿಂದ ಹಿಡಿದು ಗಣರಾಜ್ಯೋತ್ಸವದ ಪರೇಡ್ ನಲ್ಲಿ ಪಾಲ್ಗೊಳ್ಳುವವರೆಗೆ, ಮಹಿಳೆಯರ ಭಾಗವಹಿಸುವಿಕೆಯು ಅನೇಕ ಪಟ್ಟು ಹೆಚ್ಚುತ್ತಿದೆ. ದೇಶ್ ಕಿ ಬೇಟಿ ಇಂದು ನಿರ್ಭೀತ, ಧೈರ್ಯಶಾಲಿ ಮತ್ತು ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ಸಮಾನವಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Stay up to date on all the latest ಸಿನಿಮಾ ಸುದ್ದಿ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp