ಪೊಗರು ಸಿನಿಮಾದ 16 ದೃಶ್ಯಗಳಿಗೆ ಕತ್ತರಿ: ಪರಿಷ್ಕೃತ ಆವೃತ್ತಿ ಇಂದು ಅಪ್ ಲೋಡ್

ಪೊಗರು ಚಿತ್ರದಿಂದ ವಿವಾದಿತ ದೃಶ್ಯಗಳನ್ನು ತೆಗೆದುಹಾಕಲು ಚಿತ್ರತಂಡ ಒಪ್ಪಿದ್ದು, ನಿರ್ದೇಶಕ ನಂದಕಿಶೋರ್ 16 ಆಕ್ಷೇಪಾರ್ಹ ದೃಶ್ಯಗಳನ್ನು ಡಿಲೀಟ್ ಮಾಡಿದ್ದಾರೆ.

 

Published: 25th February 2021 12:39 PM  |   Last Updated: 25th February 2021 12:39 PM   |  A+A-


A still from pogaru

ಪೊಗರು ಸಿನಿಮಾ ಸ್ಟಿಲ್

Posted By : Shilpa D
Source : The New Indian Express

ಪೊಗರು ಚಿತ್ರದಿಂದ ವಿವಾದಿತ ದೃಶ್ಯಗಳನ್ನು ತೆಗೆದುಹಾಕಲು ಚಿತ್ರತಂಡ ಒಪ್ಪಿದ್ದು, ನಿರ್ದೇಶಕ ನಂದಕಿಶೋರ್ 16 ಆಕ್ಷೇಪಾರ್ಹ ದೃಶ್ಯಗಳನ್ನು ಡಿಲೀಟ್ ಮಾಡಿದ್ದಾರೆ.

ಬ್ರಾಹ್ಮಣ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ನಿರ್ಮಾಪಕ ಬಿ.ಕೆ.ಗಂಗಾಧರ್ ಮತ್ತು ಚಿತ್ರನಿರ್ದೇಶಕ ನಂದಕಿಶೋರ್ ಅವರು ವಿವಾದಿತ ದೃಶ್ಯಗಳನ್ನು ಕತ್ತರಿಸಿ ಹಾಕಿದ್ದಾರೆ.

ಫೆಬ್ರವರಿ 19 ರಂದು ರಿಲೀಸ್ ಆಗಿದ್ದ ಪೊಗರು ಸಿನಿಮಾ ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿತ್ತು. ರೌಡಿಯೊಬ್ಬ ಚಪ್ಪಲಿ ಕಾಲಿನಿಂದ ಜನಿವಾರ ಹಾಕಿರುವ, ಬ್ರಾಹ್ಮಣನನ್ನು ಒದೆಯುವ ದೃಶ್ಯಗಳು ಸೇರಿದಂತೆ ಅನೇಕ ಆಕ್ಷೇಪಾರ್ಹ ಸಂಗತಿಗಳ ವಿರುದ್ಧ ಫೆಬ್ರವರಿ 23 ರಂದು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಸೇರಿ ಈ ದೃಶ್ಯಗಳನ್ನು ತೆಗೆದು ಹಾಕುವಂತೆ ಒತ್ತಾಯಿಸಲಾಗಿತ್ತು. 

ಪೊಗರು ಸಿನಿಮಾ ತಂಡ ಮತ್ತು ಬ್ರಾಹ್ಮಣರ ಅಭಿವೃದ್ಧಿ ನಿಗಮದ ನಡುವೆ ಸಭೆ ನಡೆಸಿ ಚರ್ಚಿಸಲಾಯಿತು. ಹೀಗಾಗಿ ಸಿನಿಮಾದ 16 ದೃಶ್ಯಗಳಿಗೆ ಕತ್ತರಿ ಪ್ರಯೋಗ ಮಡಲಾಗಿದೆ, ಸಿನಿಮಾವನ್ನು ಮತ್ತೆ ಸೆನ್ಸಾರ್ ಮಾಡಿಸಿ ಹೊಸ ಆವೃತ್ತಿಯನ್ನು ಗುರುವಾರ ಅಪ್ ಲೋಡ್ ಮಾಡುವುದಾಗಿ ತಿಳಿಸಿದ್ದಾರೆ.

Stay up to date on all the latest ಸಿನಿಮಾ ಸುದ್ದಿ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp