"ದಾರಿ ಯಾವುದಯ್ಯ ವೈಕುಂಠಕೆ" 6 ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ!

"ದಾರಿ ಯಾವುದಯ್ಯ ವೈಕುಂಠಕೆ" ಚಿತ್ರವು ಬರೋಬ್ಬರಿ 6 ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳು ಆಯ್ಕೆಯಾಗಿದೆ. 

Published: 28th February 2021 12:41 PM  |   Last Updated: 28th February 2021 12:41 PM   |  A+A-


Daari yavudayya vaikuntake Film

ದಾರಿ ಯಾವುದಯ್ಯ ವೈಕುಂಠಕೆ ಚಿತ್ರ

Posted By : Srinivasamurthy VN
Source : UNI

ಬೆಂಗಳೂರು: ಕನ್ನಡ ಚಿತ್ರರಂಗ ಇದೀಗ ಬೇರೆ ಭಾಷಾ ಚಿತ್ರರಂಗಗಳಿಗೆ ಹೋಲಿಸಿದರೆ ತುಸು ಗುಣಮಟ್ಟದ ಚಿತ್ರಗಳನ್ನೇ ಕೊಡುತ್ತ ಬಂದಿವೆ. ಅಷ್ಟೇ ಅಲ್ಲ ಸಾಕಷ್ಟು ವಿಭಿನ್ನ ಸಿನಿಮಾಗಳ ಮೂಲಕ ಗಮನಸೆಳೆಯುತ್ತಿರುವುದು ಕೂಡ ಖುಷಿಯ ವಿಚಾರ. ಈಗಾಗಲೇ ಕನ್ನಡದ ಬಹುತೇಕ ಸಿನಿಮಾಗಳು ಈಗ ಗಡಿ ದಾಟಿವೆ. ಸಾಗರದಾಚೆಯೂ ಹೋಗಿವೆ‌ ಹಲವು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಚಿತ್ರೋತ್ಸವಗಳಲ್ಲೂ ಆಯ್ಕೆಯಾಗಿ ಮೆಚ್ಚುಗೆ ಪಡೆದಿವೆ.

ಈಗ ಅಂಥದೊಂದು ಖುಷಿ ವಿಚಾರ ವಿಭಿನ್ನ ಕಥಾಹಂದರ ಹೊಂದಿರುವ "ದಾರಿ ಯಾವುದಯ್ಯ ವೈಕುಂಠಕೆ" ಚಿತ್ರತಂಡದಿಂದ ಹೊರಬಂದಿದೆ.‌ ಚಿತ್ರವು ಬರೋಬ್ಬರಿ 6 ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳು ಆಯ್ಕೆಯಾಗಿದೆ. ರಾಜಸ್ಥಾನ ಅಂತರಾಷ್ಟ್ರೀಯ ಚಿತ್ರೋತ್ಸವ, ನಾವ್ಡ ಅಂತಾರಾಷ್ಟ್ರೀಯ ಚಿತ್ರೋತ್ಸವ, ಕಲರ್ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್, ಬೆಟ್ಟಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವ, 5ನೇ ಇಂಡಿಯನ್ ವರ್ಲ್ಡ್ ಫಿಲ್ಮ್ ಫೆಸ್ಟಿವಲ್, ಇಂಡಿಯನ್ ಇಂಟರ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಸೇರಿದಂತೆ ‍6 ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ಈ ಚಿತ್ರ ಆಯ್ಕೆಯಾಗಿದೆ ಎಂದು ನಿರ್ದೇಶಕ ಪೂರ್ಣಚಂದ್ರ ತಿಳಿಸಿದ್ದಾರೆ.

ಈ ಹಿಂದೆ ಕೃಷ್ಣ ಗಾರ್ಮೆಂಟ್ಸ್ ಚಿತ್ರವನ್ನು ನಿರ್ದೇಶಿಸಿದ್ದ ಸಿದ್ದು ಪೂರ್ಣಚಂದ್ರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಮನುಷ್ಯತ್ವ ಇಲ್ಲದೇ ಬರೀ ಹಣ ಅಂತ ಓಡಾಡಿಕೊಂಡು ಮಜಾ ಮಾಡುತ್ತಿದ್ದವನು ಆಕಸ್ಮಿಕವಾಗಿ ಸ್ಮಶಾನಕ್ಕೆ ಬರುತ್ತಾನೆ.

ಅಲ್ಲಿಗೆ ಬಂದು ಹೋದ ಮೇಲೆ ಅವನ ಮನಸ್ಥಿತಿ ಹೇಗಿರುತ್ತದೆ ಅನ್ನೊ ಕಥಾ ಹಂದರ ಈ ಚಿತ್ರದಲ್ಲಿದೆ. ವರ್ಧನ್, ತಿಥಿ ಖ್ಯಾತಿಯ ಪೂಜಾ, ಬಾಲ ರಾಜವಾಡಿ, ಶೀಬಾ, ಅರುಣ್ ಮೂರ್ತಿ, ಸ್ಪಂದನ, ಪ್ರಶಾಂತ್‍ರಾವ್ ವರ್ಕು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಿತಿನ್ ಛಾಯಾಗ್ರಹಣ ಹಾಗೂ ರಾಜೀವ್ ಅವರ ಸಂಕಲನ ಈ ಚಿತ್ರಕ್ಕಿದೆ.

Stay up to date on all the latest ಸಿನಿಮಾ ಸುದ್ದಿ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp