ಅಯೋಧ್ಯೆ ರಾಮ ಮಂದಿರಕ್ಕಾಗಿ ನಟಿ ಅಮೂಲ್ಯ ದಂಪತಿ 2.5 ಲಕ್ಷ ರೂ. ದೇಣಿಗೆ

ಸ್ಯಾಂಡಲ್ ವುಡ್ ಸ್ಟಾರ್ ದಂಪತಿಗಳಾದ ಅಮೂಲ್ಯ ಮತ್ತು ಜಗದೀಶ್ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ 2.5 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

Published: 25th January 2021 11:54 AM  |   Last Updated: 25th January 2021 03:44 PM   |  A+A-


Ayodhya ram mandir donation

ಅಮೂಲ್ಯ

Posted By : Raghavendra Adiga
Source : Online Desk

ಸ್ಯಾಂಡಲ್ ವುಡ್ ಸ್ಟಾರ್ ದಂಪತಿಗಳಾದ ಅಮೂಲ್ಯ ಮತ್ತು ಜಗದೀಶ್ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ 2.5 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕಾಗಿನ ನಿಧಿ ಸಮರ್ಪಣಾ ಅಭಿಯಾನ ದೇಶದಾದ್ಯಂತ ನಡೆಯುತ್ತಿದ್ದು ರಾಮಭಕ್ತರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಇದರಲ್ಲಿ ಭಾಗವಹಿಸುತ್ತಿದ್ದಾರೆ. ಅದರಂತೆಯೇ ಅಮೂಲ್ಯ ದಂಪತಿಗಳು ಸಹ ರಾಮ ಮಂದಿರ ನಿರ್ಮಾಣಕ್ಕೆ ತಮ್ಮ ಕೊಡುಗೆ ಸಲ್ಲಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ತಾಣದಲ್ಲಿ ಫೋಟೋ ಹಂಚಿಕೊಂಡಿರುವ ದಂಪತಿ "ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಿಮಿತ್ತ ನಮ್ಮ ಮನೆಗೆ ಬಿಜೆಪಿ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ಜೀ ರವರು ಆಗಮಿಸಿದ್ದರು. ಪ್ರತಿ ವರ್ಷವೂ ಜನ್ಮದಿನಾಚರಣೆಗಾಗಿ  ವ್ಯಯಿಸುತ್ತಿದ್ದ ಮೊತ್ತಕ್ಕೆ ನಮ್ಮಿಂದಾದ ಮೊತ್ತವನ್ನು ಸೇರಿಸಿ ಪ್ರಭು ಶ್ರೀರಾಮ ಮಂದಿರಕ್ಕಾಗಿ ಅರ್ಪಿಸಿದೆವು. ಈ ಕ್ಷಣ ನಮಗೆ ಅತ್ಯಂತ ಸಾರ್ಥಕತೆಯ ಕ್ಷಣವೆನಿಸಿತು." ಎಂದು ಬರೆದಿದ್ದಾರೆ.

ನಟಿ ಅಮೂಲ್ಯ ಮತ್ತು ಪತಿ ಜಗದೀಶ್ 1.5 ಲಕ್ಷ ಹಾಗೂ ಅವರ ತಂದೆ ಜಿ.ಎಸ್. ರಾಮಚಂದ್ರ ಅವರ ಹೆಸರಲ್ಲಿ 1 ಲಕ್ಷ ದೇಣಿಗೆ ನೀಡಲಾಗಿದೆ.

ಇದಕ್ಕೂ ಮುನ್ನ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವಂತೆ ಬಾಲಿವುಡ್ ನಟ ಅಕ್ಷಯ್ ಕುಮಾರ್, ಸ್ಯಾಂಡಲ್ ವುಡ್ ನಟಿ ಪ್ರಣೀತಾ ಸುಭಾಷ್, ಹಿರಿಯ ನಟ ಜಗ್ಗೇಶ್, ತೆಲುಗು ಸ್ಟಾರ್ ನಟ ಪವನ್ ಕಲ್ಯಾಣ ಸಹ ಕರೆ ನೀಡಿದ್ದರು. 

Stay up to date on all the latest ಸಿನಿಮಾ ಸುದ್ದಿ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp