ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆ ರಾಯಭಾರಿಯಾಗಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಪ್ಪಿಗೆ?
ಈಗಾಗಲೇ ಸಾಕಷ್ಟು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕನ್ನಡ ಚಲನಚಿತ್ರ ರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು, ಶೀಘ್ರದಲ್ಲೇ ಕೃಷಿ ಇಲಾಖೆ ರಾಯಭಾರಿಯಾಗಿ ಕಾರ್ಯ ಆರಂಭಿಸಲಿದ್ದಾರೆಂದು ತಿಳಿದುಬಂದಿದೆ.
Published: 25th January 2021 10:38 AM | Last Updated: 25th January 2021 10:40 AM | A+A A-

ನಟ ದರ್ಶನ್ ಅವರನ್ನು ಭೇಟಿಯಾಗಿರುವ ಬಿಸಿ ಪಾಟೀಲ್
ಬೆಂಗಳೂರು: ಈಗಾಗಲೇ ಸಾಕಷ್ಟು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕನ್ನಡ ಚಲನಚಿತ್ರ ರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು, ಶೀಘ್ರದಲ್ಲೇ ಕೃಷಿ ಇಲಾಖೆ ರಾಯಭಾರಿಯಾಗಿ ಕಾರ್ಯ ಆರಂಭಿಸಲಿದ್ದಾರೆಂದು ತಿಳಿದುಬಂದಿದೆ.
ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆಯ ರಾಯಭಾರಿಯಾಗಲು ದರ್ಶನ್ ಅವರು ಒಪ್ಪಿಗೆ ನೀಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಕೃಷಿ ಸಚಿವ ಬಿಸಿ ಪಾಟೀಲ್ ಅವರು ದರ್ಶನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ.
ಮೈಸೂರಿನಲ್ಲಿನ ದರ್ಶನ್ ಅವರ ಫಾರ್ಮ್ ಹೌಸ್ನಲ್ಲಿ ಚಾಲೆಂಜಿಂಗ್ ಸ್ಟಾರ್ ಅವರನ್ನು ಭೇಟಿಯಾದ ಬಿ.ಸಿ. ಪಾಟೀಲ್ ಅವರು, ಕೃಷಿ ಇಲಾಖೆ ರಾಯಭಾರಿ ಯೋಜನೆಯ ಬಗ್ಗೆ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.
ರೈತ ಪರ ಕಾರ್ಯಕ್ರಮಗಳಲ್ಲಿ ಸರ್ಕಾರದ ಮುಖವಾಗಲಿರುವ ದರ್ಶನ್ ಅವರು, ಶೀಘ್ರದಲ್ಲಿಯೇ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಭಾಗಿಯಾಗುವ ಬಗ್ಗೆ ಸದ್ಯದರಲ್ಲಿಯೇ ದಿನಾಂಕವೂ ಪ್ರಕಟಗೊಳ್ಳಲಿದೆ ಎನ್ನಲಾಗುತ್ತಿದೆ.