ಬರಗೂರು ರಾಮಚಂದ್ರಪ್ಪ ನಿರ್ದೇಶನದ 'ಅಮೃತಮತಿ’ ಅತ್ಯುತ್ತಮ ವಿದೇಶಿ ಭಾಷಾ ಚಲನಚಿತ್ರ

ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರಕ್ಕೆ ಅಮೆರಿಕದ ಅಟ್ಲಾಂಟದಲ್ಲಿ ನಡೆದ 'ಅಟ್ಲಾಂಟ ಪ್ರಶಸ್ತಿ ಅರ್ಹತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಪಡೆದಿದೆ.

Published: 28th January 2021 12:29 PM  |   Last Updated: 28th January 2021 12:42 PM   |  A+A-


Hari priya

ಹರಿಪ್ರಿಯಾ

Posted By : Shilpa D
Source : UNI

ಬೆಂಗಳೂರು: ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರಕ್ಕೆ ಅಮೆರಿಕದ ಅಟ್ಲಾಂಟದಲ್ಲಿ ನಡೆದ 'ಅಟ್ಲಾಂಟ ಪ್ರಶಸ್ತಿ ಅರ್ಹತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಪಡೆದಿದೆ.

ಅಮೃತಮತಿ ಈಗಾಗಲೇ 5 ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ನೋಯ್ಡಾದ ನಾಲ್ಕನೇ ಭಾರತೀಯ ವಿಶ್ವ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗದ ಪ್ರದರ್ಶನಕ್ಕೆ ಆಯ್ಕೆಯಾಗಿತ್ತು. ಈ ಚಲನಚಿತ್ರೋತ್ಸವದಲ್ಲಿ ಅಮೃತಮತಿ ಪಾತ್ರಧಾರಿ ಹರಿಪ್ರಿಯ ಶ್ರೇಷ್ಠನಟಿ ಪ್ರಶಸ್ತಿಗೆ ಭಾಜನರಾಗಿದ್ದರು .

ಅಮೃತಮತಿ ಸಿನಿಮಾ 13ನೇ ಶತಮಾನದ ಜನ್ನ ಕವಿಯ ಯಶೋಧರ ಚರಿತೆಯನ್ನು ಆಧರಿಸಿ ಮಾಡಿರುವ ಸಿನಿಮಾವಾಗಿದೆ. ಯಶೋಧರನ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಇನ್ನೂ ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಷಾಯ್, ತಿಲಕ್, ಸುಪ್ರಿಯಾ ರಾವ್, ಸೇರಿದಂತೆ ಅನೇಕರು ಬಣ್ಣಹಚ್ಚಿದ್ದಾರೆ. ಚಿತ್ರಕ್ಕೆ ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರವು ಮಾರ್ಚ್ ಮೊದಲ ವಾರದಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುವ ಸಾಧ್ಯತೆ ಇದೆ. ಮುಂಬೈ ಮೂಲದ ಸಿಎಆರ್ ಯು ಎಂಟರ್ ಪ್ರೈಸಸ್ ಸಂಸ್ಥೆ ಈಚಿತ್ರದ ಪ್ರದರ್ಶನದ ಹಕ್ಕು ಪಡೆದಿದೆ. ಚಿತ್ರಮಂದಿರ ಮಾತ್ರವಲ್ಲದೆ ಈ ಸಿನಿಮಾ ಒಟಿಟಿಯಲ್ಲೂ ರಿಲೀಸ್ ಆಗುವ ಸಾಧ್ಯತೆ ಇದೆ.

Stay up to date on all the latest ಸಿನಿಮಾ ಸುದ್ದಿ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp