ಟಾಲಿವುಡ್ ವಿರುದ್ಧ ಕರ್ನಾಟಕ ವಾಣಿಜ್ಯ ಮಂಡಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ದೂರು!
ರಾಬರ್ಟ್ ಚಿತ್ರಕ್ಕೆ ಆಂಧ್ರದಲ್ಲಿ ಥಿಯೇಟರ್ ಸಮಸ್ಯೆ ಎದುರಾಗಿರುವುದಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕ ಫಿಲ್ಮ್ ಛೇಂಬರ್ ಗೆ ದೂರು ನೀಡಿದ್ದಾರೆ.
Published: 29th January 2021 04:15 PM | Last Updated: 29th January 2021 04:15 PM | A+A A-

ದರ್ಶನ್
ಬೆಂಗಳೂರು: ರಾಬರ್ಟ್ ಚಿತ್ರಕ್ಕೆ ಆಂಧ್ರದಲ್ಲಿ ಥಿಯೇಟರ್ ಸಮಸ್ಯೆ ಎದುರಾಗಿರುವುದಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕ ಫಿಲ್ಮ್ ಛೇಂಬರ್ ಗೆ ದೂರು ನೀಡಿದ್ದಾರೆ.
ಮಾರ್ಚ್ 11ರಂದು ಕನ್ನಡ ಮತ್ತು ತೆಲುಗಿನಲ್ಲಿ ರಾಬರ್ಟ್ ಸಿನಿಮಾ ಬಿಡುಗಡೆಯಾಗುತ್ತಿದೆ. ಅದೇ ದಿನ ತೆಲುಗಿನಲ್ಲೂ ಕೂಡ ಕೆಲ ನಟರ ಚಿತ್ರಗಳು ರಿಲೀಸ್ ಆಗುತ್ತಿವೆ. ಹೀಗಾಗಿ ತೆಲುಗು ಫಿಲ್ಮ್ ಛೇಂಬರ್ ತೆಲುಗು ಬಿಟ್ಟು ಬೇರೆ ಭಾಷೆಗಳಿಗೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿತ್ತು.
ಇದರ ವಿರುದ್ಧ ದರ್ಶನ್ ಹಾಗೂ ರಾಬರ್ಟ್ ಚಿತ್ರತಂಡ ಕರ್ನಾಟಕ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದು ತೆಲುಗು ಅವತರಣಿಕೆಯ ಚಿತ್ರವನ್ನು ಬಿಡುಗಡೆ ಮಾಡಲು ಅವಕಾಶ ನೀಡುವಂತೆ ಕೋರಿದೆ.
ನಮ್ಮ ಚಿತ್ರಗಳು ತೆಲುಗಿನಲ್ಲಿ ಬಿಡುಗಡೆಯಾದರೆ ಅಲ್ಲಿನ ನಾಯಕರಿಗೆ ತೊಂದರೆಯಾಗುತ್ತದೆ ಅಂತ ಹೇಳುತ್ತಿದ್ದಾರೆ. ಅದೇ ಅಲ್ಲಿನ ನಾಯಕರ ಚಿತ್ರಗಳು ಇಲ್ಲಿ ಬಿಡುಗಡೆಯಾದರೆ ನಮಗೆ ತೊಂದರೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.
ನಾನು ಈಗಾಗಲೇ 50 ಸಿನಿಮಾಗಳಲ್ಲಿ ನಟಿಸಿದ್ದೇನೆ. ಇದರಿಂದ ನನಗೇನು ತೊಂದರೆಯಾಗುವುದಿಲ್ಲ. ಆದರೆ ನಮ್ಮಲ್ಲೂ ನವ ನಟರು ದೊಡ್ಡ ದೊಡ್ಡ ಕನಸುಗಳನ್ನು ಇಟ್ಟುಕೊಂಡು ಚಿತ್ರರಂಗಕ್ಕೆ ಬರುತ್ತಿದ್ದಾರೆ ಅವರಿಗೆ ತೊಂದರೆಯಾಗುತ್ತದೆ ಎಂದು ಹೇಳಿದ್ದಾರೆ.