ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್: ಭಜರಂಗಿ-2 ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್!

ಥಿಯೇಟರ್ ಓಪನ್ ಮಾಡಲು ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕನ್ನಡ ಸಿನಿಮಾಗಳನ್ನು ರಿಲೀಸ್ ಮಾಡಲು ಸ್ಯಾಂಡಲ್ ವುಡ್ ನಿರ್ಧರಿಸಿದೆ.

Published: 21st July 2021 11:17 AM  |   Last Updated: 21st July 2021 01:19 PM   |  A+A-


Bhajarangi-2 poster

ಭಜರಂಗಿ-2 ಸಿನಿಮಾ ಪೋಸ್ಟರ್

Posted By : Shilpa D
Source : The New Indian Express

ಥಿಯೇಟರ್ ಓಪನ್ ಮಾಡಲು ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕನ್ನಡ ಸಿನಿಮಾಗಳನ್ನು ರಿಲೀಸ್ ಮಾಡಲು ಸ್ಯಾಂಡಲ್ ವುಡ್ ನಿರ್ಧರಿಸಿದೆ.

ಬಿಗ್ ಬಜೆಟ್ ಸಿನಿಮಾಗಳನ್ನು ಬಿಡುಗಡೆ ಮಾಡಲು ನಿರ್ದೇಶಕರು ಮುಂದಾಗಿದ್ದಾರೆ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷೆಯ 'ಭಜರಂಗಿ-2' ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 2ನೇ ಲಾಕ್ ಡೌನ್ ಬಳಿಕ ಬಿಡುಗಡೆ  ದಿನಾಂಕ ಘೋಷಣೆ ಮಾಡಿದ ಮೊದಲ ಸಿನಿಮಾ ತಂಡ ಇದಾಗಿದೆ.

ಹ್ಯಾಟ್ರಿಕ್ ಹೀರೋ ಸಿನಿಮಾ ರಿಲೀಸ್ ಡೇಟ್ ಬಹಿರಂಗವಾಗಿದ್ದು, ಶಿವಣ್ಣ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಶಿವರಾಜ್ ಕುಮಾರ್ ನಟನೆಯ 'ಭಜರಂಗಿ-2' ಸಿನಿಮಾ ಸೆಪ್ಟಂಬರ್ 10'ರಂದು ಬಿಡುಗಡೆಯಾಗಲಿದೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಸೆಪ್ಟಂಬರ್ 10 ಗಣೇಶ ಹಬ್ಬ. ಗಣೇಶ ಚತುರ್ಥಿ ದಿನವೇ ಭಜರಂಗಿ-2 ಸಿನಿಮಾ ಬಿಡುಗಡೆಯಾಗುತ್ತಿರುವುದು ಹಬ್ಬದ ಸಂಭ್ರಮವನ್ನು ಡಬಲ್ ಮಾಡಿದೆ. 'ಭಜರಂಗಿ-2' ಸಿನಿಮಾ ಚಿತ್ರೀಕರಣ ಮುಗಿಸಿ ಒಂದು ವರ್ಷದ ಮೇಲಾಗಿದೆ. ಕೊರೋನಾ ಕಾರಣದಿಂದ ಸಿನಿಮಾ ಬಿಡುಗಡೆ ತಡವಾಗುತ್ತಲೆ ಇತ್ತು. ಇದೀಗ ಅಧಿಕೃತವಾಗಿ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಮಾಡಿ ಅಭಿಮಾನಿಗಳ ಸಂತಸ ಹೆಚ್ಚಿಸಿದೆ.

ಭಜರಂಗಿ 2 ರ ಸಿನಿಮಾ ಕೆಲಸಗಳಲ್ಲಿ ಕೇವಲ 40 ರಷ್ಟು ಪೋಸ್ಟ್ ಪ್ರೊಡಕ್ಷನ್ ಕೆಲಸ ಮಾತ್ರ ಉಳಿದಿದೆ ಎಂದು ಸಂದರ್ಶನವೊಂದರಲ್ಲಿ ನಿರ್ದೇಶಕ ಹರ್ಷ ಹೇಳಿದ್ದರು. ಶಿವಣ್ಣ ನಟನೆಯ 125ನೇ ಸಿನಿಮಾ ವೇದ ಚಿತ್ರವನ್ನು ಹರ್ಷ ನಿರ್ದೇಶಿಸುತ್ತಿದ್ದಾರೆ.

ಭಜರಂಗಿ-2 ನಿರ್ದೇಶಕ ಹರ್ಷ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಿನಿಮಾ. ಜಯಣ್ಣ ಫಿಲ್ಮ್ಸ್ ನಿರ್ಮಾಣದಲ್ಲಿ ಸಿನಿಮಾ ಮೂಡಿಬರುತ್ತಿದೆ. ಹರ್ಷ ಮತ್ತು ಶಿವಣ್ಣ ಕಾಂಬಿನೇಷನ್ ನಲ್ಲಿ ಭಜರಂಗಿ ಮತ್ತು ವಜ್ರಕಾಯ ಸಿನಿಮಾ ಬಳಿಕ ಮೂಡಿಬರುತ್ತಿರುವ ಚಿತ್ರವಿದು. ಚಿತ್ರದಲ್ಲಿ ಶಿವಣ್ಣಗೆ ನಾಯಕಿಯಾಗಿ ಭಾವನ ಮೆನನ್ ಕಾಣಿಸಿಕೊಂಡಿದ್ದಾರೆ.

ನಟಿ ಭಾವನಾ ಮೆನನ್ ಟಗರು ಸಿನಿಮಾದ ಬಳಿಕ ಶಿವಣ್ಣ ಜೊತೆ ಎರಡನೇ ಬಾರಿ ನಟಿಸುತ್ತಿದ್ದಾರೆ. ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿರುವ ಭಜರಂಗಿ-2' ಹೇಗಿರಲಿದೆ ಎನ್ನುವ ಕುತೂಹಲಕ್ಕೆ ಸೆಪ್ಟಂಬರ್ 10ರಂದು ತೆರೆಬೀಳಲಿದೆ.


Stay up to date on all the latest ಸಿನಿಮಾ ಸುದ್ದಿ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp