ರಾಜ್ ಕುಂದ್ರಾ ನೀಲಿ ಚಿತ್ರ ಪ್ರಕರಣ: ಪತ್ನಿ ಶಿಲ್ಪಾ ಶೆಟ್ಟಿ ವಿಚಾರಣೆ, ಹೇಳಿಕೆ ದಾಖಲು
ನೀಲಿ ಚಿತ್ರಗಳ ನಿರ್ಮಾಣ, ಪ್ರಸಾರ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉದ್ಯಮಿ ರಾಜ್ ಕುಂದ್ರಾ ಅವರ ಪತ್ನಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರನ್ನು ಶುಕ್ರವಾರ ಪೊಲೀಸರು ವಿಚಾರಣೆ ನಡೆಸಿದ್ದಾರೆ.
Published: 23rd July 2021 09:24 PM | Last Updated: 23rd July 2021 09:24 PM | A+A A-

ಶಿಲ್ಪಾ ಶೆಟ್ಟಿ - ರಾಜ್ ಕುಂದ್ರಾ
ಮುಂಬೈ: ನೀಲಿ ಚಿತ್ರಗಳ ನಿರ್ಮಾಣ, ಪ್ರಸಾರ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉದ್ಯಮಿ ರಾಜ್ ಕುಂದ್ರಾ ಅವರ ಪತ್ನಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರನ್ನು ಶುಕ್ರವಾರ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಕುಂದ್ರಾ ಅವರನ್ನು ಜುಲೈ 19 ರ ರಾತ್ರಿ ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದು, ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಕೇಸ್ ದಾಖಲಿಸಲಾಗಿದೆ.
ಪೊಲೀಸರು ಇಂದು ಮಧ್ಯಾಹ್ನ ಶಿಲ್ಪಾ ಶೆಟ್ಟಿ ಅವರನ್ನು ಅವರ ಜೂಹು ನಿವಾಸದಲ್ಲಿ ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವೇಳೆ ಶಿಲ್ಪಾ ಶೆಟ್ಟಿ ನಿವಾಸ ಶೋಧ ನಡೆಸಿದ ಮುಂಬೈ ಅಪರಾಧ ವಿಭಾಗದ ಪೊಲೀಸರು, ನಟಿಯ ಲ್ಯಾಪ್ ಟಾಪ್ ಹಾಗೂ ಇತರೆ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಮಧ್ಯೆ ಕುಂದ್ರಾ ಅವರ ಪೊಲೀಸ್ ಕಸ್ಟಡಿ ಅವಧಿಯನ್ನು ಜುಲೈ 27ರ ವರೆಗೆ ವಿಸ್ತರಿಸಲಾಗಿದೆ.