ಜಯಂತಿ-ಜಗ್ಗೇಶ್
ಜಯಂತಿ-ಜಗ್ಗೇಶ್

ಮಹಾನಟಿ ಜಯಂತಿಯವರದು ಮಗುವಿನಂತಹ ಮನಸ್ಸು, 'ಲವ್ ಯೂ ಅಮ್ಮ': ನಟ ಜಗ್ಗೇಶ್

ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಅವರ ನಿಧನಕ್ಕೆ ಸಿನಿಮಾ ಮತ್ತು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
Published on

ಬೆಂಗಳೂರು: ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಅವರ ನಿಧನಕ್ಕೆ ಸಿನಿಮಾ ಮತ್ತು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಹಿರಿಯ ನಟ ಜಗ್ಗೇಶ್ ಕೂಡ ಟ್ವೀಟ್ ಮಾಡಿ ಭಾವುಕರಾಗಿದ್ದಾರೆ. ಕೆಲವೊಮ್ಮೆ ನನ್ನ ಹಾಸ್ಯಕಂಡು ಮಗುವಂತೆ ನಗುತ್ತಿದ್ದರು. ಹೋದ ಅನೇಕ ಹಿರಿನಟರ ಸಾಲಿಗೆ ಜಯಮ್ಮ ಸೇರಿಬಿಟ್ಟರು. ನಿಮ್ಮ ಆತ್ಮ ಶಾರದೆಯಲ್ಲಿ ಲೀನವಾಗಲಿ. loveyou ಅಮ್ಮ ಎಂದು ಹೇಳಿದ್ದಾರೆ.

ನನ್ನ ಬಾಲ್ಯದಿಂದ ನಾನು ತುಂಬ ಇಷ್ಟಪಟ್ಟ ನಟಿಯರಲ್ಲಿ ಭಾರತಿ ಅಮ್ಮ ಹಾಗೂ ಜಯಂತಿ ಅಮ್ಮ..ಭಾರತಿ ಅಮ್ಮನ ಜೊತೆ ನಟಿಸಲು ನನ್ನ ಅವಕಾಶ ಸಿಗಲಿಲ್ಲಾ ಆದರೆ ಜಯಂತಿ ಅಮ್ಮನ ಜೊತೆ ಅನೇಕ ಚಿತ್ರಗಳಲ್ಲಿ ನಟಿಸಿದ ಸಮಾಧಾನ ಸಂತೋಷ ನನ್ನ ಕಲಾಬದುಕಿಗೆ.. ಅವರ ಜೊತೆ ಪಟೇಲ ನಟಿಸುವಾಗ ಪಾಂಡುಪುರದ ಚಿಕ್ಕಾಡೆ ಗ್ರಾಮದಲ್ಲಿ ಶೂಟಿಂಗ್ ವಿರಾಮ ಸಿಕ್ಕು ಸಮಯ ಕಳೆವ ಅವಕಾಶ. ಸಿಕ್ಕಿತು ಆಗ ನನ್ನ ಸಿನಿಮ ಪಯಣ ಅವರ ಜೊತೆ ಹಂಚಿಕೊಂಡ ಸಮಯ ಮರೆಯಲಾಗದ ಕ್ಷಣ. ಅವರಿಗೆ ನಾನು ರೇಗಿಸಿದ್ದು ಜಯಮ್ಮ ದೊರದ ಬೆಟ್ಟ ಚಿತ್ರದಲ್ಲಿ ನಿಮ್ಮ ನೋಡಿ ಈಗ ಅನ್ನಿಸುತ್ತದೆ ಅಯ್ಯೋ ದೇವರೆ ಇಂದು ನಾಯಕನಟ ಆಗುವ ಬದಲು ದೂರದ ಬೆಟ್ಟದ ಸಮಯ ಆಗಿದ್ದರೆ ಎಂಥ ಅದ್ಭುತ ಇರುತ್ತಿತ್ತು ಎಂದಾಗ ನಾಚಿ ನೀರಾಗಿದ್ದರು ಹಾಗು ಕೋಲು ಹಿಡಿದು ಅಟ್ಟಾಡಿಸಿ ನಕ್ಕು ಆನಂದಿಸಿ you are my favorite actor ಎಂದು ಮುತ್ತಿಕ್ಕಿದ್ದರು! ಕೆಲವೊಮ್ಮೆ ನನ್ನ ಹಾಸ್ಯಕಂಡು ಮಗುವಂತೆ ನಗುತ್ತಿದ್ದರು! ಮನಸ್ಸು ಮಗುವಂತೆ ನಡೆದಸಂಗತಿ ಮೆಲುಕಾಕಿ ಆನಂದಿಸುತ್ತದೆ! ಇಂದು ಆ ಮಹಾನಟಿ ಇಲ್ಲಾ ಎಂದಾಗ ಮನಸ್ಸಿಗೆ ನೋವಾಯಿತು! ಹೋದ ಅನೇಕ ಹಿರಿನಟರ ಸಾಲಿಗೆ ಜಯಮ್ಮ ಸೇರಿಬಿಟ್ಟರು! ನಿಮ್ಮಆತ್ಮ ಶಾರದೆಯಲ್ಲಿ ಲೀನವಾಗಲಿ! loveyou ಅಮ್ಮ. ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com