ಬ್ರಾಹ್ಮಣರ ಅವಹೇಳನ: ನಟ ಚೇತನ್ ವಿರುದ್ಧ ಎಫ್ ಐ ಆರ್ ದಾಖಲು
ಬ್ರಾಹ್ಮಣರು ಹಾಗೂ ಬ್ರಾಹ್ಮಣ್ಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Published: 11th June 2021 10:22 AM | Last Updated: 11th June 2021 10:22 AM | A+A A-

ಚೇತನ್
ಬೆಂಗಳೂರು: ಬ್ರಾಹ್ಮಣರು ಹಾಗೂ ಬ್ರಾಹ್ಮಣ್ಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ನೀಡಿದ ದೂರಿನ ಮೇರೆಗೆ ಆ ದಿನಗಳು ಚಿತ್ರದ ಖ್ಯಾತಿಯ ಚೇತನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಧಾರ್ಮಿಕ ಭಾವನೆ ಕೆರಳಿಸುವುದು (ಐಪಿಸಿ 129(ಎ) ಹಾಗೂ ದ್ವೇಷ ಭಾವನೆ ಹೆಚ್ಚಿಸುವ (ಐಪಿಸಿ 153 (ಬಿ) ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಚೇತನ್ ಮಾತನಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡಿದೆ. ಹಿಂದೂ ಧರ್ಮ ನಾನಾ ಪ್ರವರ್ಗಗಳಲ್ಲಿ ಇರುವವರನ್ನು ಬೇರ್ಪಡಿಸಿ ಅವರಲ್ಲಿ ಧರ್ಮಾಂಧತೆಯನ್ನು ಹುಟ್ಟುಹಾಕಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಉದ್ದೇಶದಿಂದ ಚೇತನ್ ಅವರು, ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎಂಬುದಾಗಿ ಶರ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಲಾಕ್ ಡೌನ್ ವೇಳೆ ಬ್ರಾಹ್ಮಣರಿಗೆ ಪ್ರತ್ಯೇಕವಾಗಿ ಆಹಾರ ವಿತರಣೆ ಮಾಡಿದ ನಟರೊಬ್ಬರ ಬಗ್ಗೆ ಚೇತನ್ ಟೀಕಿಸಿದ್ದರು.